ಮಕ್ಕಳಿಗೆ ಸಮವಸ್ತ್ರ ವಿತರಣೆ

Contributed byasmysvkr@gmail.com|Vijaya Karnataka
free clothing distribution to children a noble initiative by grampanchayat in chapparadahalli
ಮಕ್ಕಳಿಗೆ ಸಮವಸ್ತ್ರ ವಿತರಣೆ

ವಿಕ ಸುದ್ದಿಲೋಕ ಬೆಟ್ಟದಪುರ
ಪಿರಿಯಾಪಟ್ಟಣ ತಾಲೂಕಿನ ಚಪ್ಪರದಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಗ್ರಾಮ ಪಂಚಾಯಿತಿ ವಾಟರ್ ಮ್ಯಾನ್ ಡಂಕಣಚಾರಿ ಅವರು ತಮ್ಮ ಸ್ವಂತ ಖರ್ಚಿನಲ್ಲಿಉಚಿತವಾಗಿ ಸಮವಸ್ತ್ರಗಳನ್ನು ಬುಧವಾರ ವಿತರಿಸಿದರು.

ಪಿಡಿಒ ಕೆ.ಕೆ. ಶ್ರೀದೇವಿ ಮಾತನಾಡಿ, ‘‘ಮಕ್ಕಳಿಗೆ ಅಗತ್ಯವಿರುವ ವಸ್ತುಗಳನ್ನು ದಾನಿಗಳ ನೆರವಿನಿಂದ ಒದಗಿಸುವುದು ಉತ್ತಮ ಕಾರ್ಯವಾಗಿದೆ. ಅಂಗನವಾಡಿ ಮಕ್ಕಳಿಗೆ ಸಮವಸ್ತ್ರ ವಿತರಿಸುವ ಮೂಲಕ ಡಂಕಣಚಾರಿ ಅವರು ಸಮಾಜಮುಖಿ ಕಾರ್ಯಕ್ಕೆ ಮುಂದಾಗಿದ್ದಾರೆ. ಇಂತಹ ಸೇವಾ ಮನೋಭಾವದ ಕಾರ್ಯಗಳು ಇತರರಿಗೂ ಪ್ರೇರಣೆಯಾಗಲಿವೆ,’’ ಎಂದು ಹೇಳಿದರು.

ಕಾರ್ಯಕ್ರಮದಲ್ಲಿಬಿಲ್ ಕಲೆಕ್ಟರ್ ರಮಣಯ್ಯ, ಅಂಗನವಾಡಿ ಕಾರ್ಯಕರ್ತೆಯರಾದ ಆಶಾ, ರತ್ನಾ, ಸಹಾಯಕಿಯರಾದ ರಾಧಾ, ಗೌರಮ್ಮ ಹಾಗೂ ಸಿಬ್ಬಂದಿ ಇದ್ದರು.

02ಬಿಟಿಪಿ06

ಚಪ್ಪರದಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಗ್ರಾಮ ಪಂಚಾಯಿತಿ ವಾಟರ್ ಮ್ಯಾನ್ ಡಂಕಣಚಾರಿ ಅವರು ತಮ್ಮ ಸ್ವಂತ ಖರ್ಚಿನಲ್ಲಿಉಚಿತವಾಗಿ ಸಮವಸ್ತ್ರಗಳನ್ನು ವಿತರಿಸಿದರು.