ಹೊಳಲ್ಕೆರೆ: ಗ್ರಾಮೀಣ ಭಾಗದ ಜನರಿಗೆ ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಡುವ ಉದ್ದೇಶದಿಂದ ಶಿವಮೊಗ್ಗ-ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿ ದೊಗ್ಗನಾಳ್ ಗೇಟ್ ನಿಂದ ತಾಳಿಕಟ್ಟೆವರೆಗೆ ಸುಮಾರು 12 ಕೋಟಿ ರೂ. ವೆಚ್ಚದಲ್ಲಿರಸ್ತೆ ವಿಸ್ತರಣೆ ಹಾಗೂ ಡಾಂಬರೀಕರಣ ಮಾಡಲಾಗುತ್ತಿದೆ ಎಂದು ಶಾಸಕ ಡಾ.ಎಂ.ಚಂದ್ರಪ್ಪ ಹೇಳಿದರು.ತಾಲೂಕಿನ ಹನುಮಲಿ ಬಳಿ 12 ಕೋಟಿ ರೂ. ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸೋಮವಾರ ಚಾಲನೆ ನೀಡಿ ಮಾತನಾಡಿದರು.
ಬಿಜೆಪಿ ಮಂಡಲ ಅಧ್ಯಕ್ಷ ಡಿ.ಬಿ.ಕುಮಾರ್ , ಗ್ರಾಪಂ ಮಾಜಿ ಅಧ್ಯಕ್ಷ ಡಿ.ಸಿ.ಮೋಹನ್ , ನುಲೇನೂರು ಶೇಖರ್ , ಜಿಪಂ ಮಾಜಿ ಉಪಾಧ್ಯಕ್ಷ ಗಂಗಾಧರ್ , ಹಳ್ಳಪ್ಪ, ಗ್ರಾಪಂ ಮಾಜಿ ಅಧ್ಯಕ್ಷ ಷಣ್ಮುಖಪ್ಪ, ಶಿವಣ್ಣ, ಸುನೀಲ್ , ಗುತ್ತಿಗೆದಾರ ರಾಜಣ್ಣ ಹಾಗೂ ಗ್ರಾಮದ ಮುಖಂಡರು ಇದ್ದರು.
---
ಸೆ. 2.ಹೆಚ್ . ಎಲ್ . ಕೆ. 2
ಹೊಳಲ್ಕೆರೆ ತಾಲೂಕಿನ ತಾಳಿಕಟ್ಟೆಯಿಂದ ದೊಗ್ಗನಾಳ್ ವರೆಗೂ 12 ಕೋಟಿ ರೂ. ವೆಚ್ಚದಲ್ಲಿರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ ನೀಡಿದರು.