ತಿಪ್ಪೇಸ್ವಾಮಿ ಸಮಗ್ರ ಸಾಹಿತ್ಯ ಸಂಪುಟಗಳ ಲೋಕಾರ್ಪಣೆ ಇಂದು

Contributed bymadhugirinews@gmail.com|Vijaya Karnataka
grand launch of tippeswamys collected works
ವಿಕ ಸುದ್ದಿಲೋಕ ತುಮಕೂರು

ಕನ್ನಡದ ಹಿರಿಯ ಸಾಹಿತಿ ಪಿ.ಆರ್ . ತಿಪ್ಪೇಸ್ವಾಮಿ ಅವರ ಸಮಗ್ರ ಸಾಹಿತ್ಯ ಸಂಪುಟಗಳ ಲೋಕಾರ್ಪಣೆ ಸಮಾರಂಭವನ್ನು ಕನ್ನಡ ಪುಸ್ತಕ ಪ್ರಾಧಿಕಾರದಿಂದ ಸೆ.18ರಂದು ಶುಕ್ರವಾರ ನಗರದಲ್ಲಿಆಯೋಜಿಸಲಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಮಾನಸ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿಬುಧವಾರ ಸುದ್ದಿಗೋಷ್ಠಿಯಲ್ಲಿಮಾತನಾಡಿದ ಅವರು, ಉಪ ಮುಖ್ಯಮಂತ್ರಿ ಹಾಗೂ ಕಂದಾಯ, ಯುವಜನ ಸೇವೆ ಮತ್ತು ಕ್ರೀಡಾ ಸಚಿವ ಡಾ.ಜಿ. ಪರಮೇಶ್ವರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಿ.ಆರ್ . ತಿಪ್ಪೇಸ್ವಾಮಿ ಅವರ ಸಮಗ್ರ ಸಾಹಿತ್ಯ ಸಂಪುಟಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ.

ನಗರ ಶಾಸಕ ಜಿ.ಬಿ. ಜ್ಯೋತಿಗಣೇಶ್ , ರೈಲ್ವೆ ಮತ್ತು ಜಲಶಕ್ತಿ ಖಾತೆ ಸಹಾಯಕ ಸಚಿವ ವಿ. ಸೋಮಣ್ಣ, ಶಿಷ್ಟಾಚಾರದಂತೆ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಗಣ್ಯರು ಕಾರ್ಯಕ್ರಮದಲ್ಲಿಪಾಲ್ಗೊಳ್ಳಲಿದ್ದಾರೆ. ಮಾಜಿ ಸಚಿವ ಎಚ್ .ಎಂ. ರೇವಣ್ಣ, ರಾಜ್ಯ ಮಾಹಿತಿ ಆಯುಕ್ತ ರುದ್ರಣ್ಣ ಹರ್ತಿಕೋಟೆ, ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ಶ್ರೀದೇವಿ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಡಾ.ಎಂ.ಆರ್ . ಹುಲಿನಾಯ್ಕರ್ , ಕಸಾಪ ಜಿಲ್ಲಾಧ್ಯಕ್ಷ ಕೆ.ಎಸ್ . ಸಿದ್ಧಲಿಂಗಪ್ಪ ಹಾಗೂ ಸಂಪುಟಗಳ ಸಂಪಾದಕ ಪ್ರೊ. ಚಿಕ್ಕಣ್ಣ ಯಣ್ಣೆಕಟ್ಟೆ ಭಾಗವಹಿಸಲಿದ್ದಾರೆ ಎಂದರು.

769ಕ್ಕೂ ಹೆಚ್ಚು ಕೃತಿಗಳ ಪ್ರಕಟಣೆ:

ಕನ್ನಡ ಪುಸ್ತಕ ಪ್ರಾಧಿಕಾರವು ಪುಸ್ತಕ ಪ್ರಕಟಣೆ ಮತ್ತು ಮಾರಾಟದ ಜತೆಗೆ ಪುಸ್ತಕ ಮೇಳಗಳ ಆಯೋಜನೆ, ಯುವ ಬರಹಗಾರರಿಗೆ ಪ್ರೋತ್ಸಾಹಧನ, ‘ನನ್ನ ಮೆಚ್ಚಿನ ಪುಸ್ತಕ’, ‘ಅಂಗಳದಲ್ಲಿತಿಂಗಳ ಪುಸ್ತಕ’ ಸೇರಿದಂತೆ ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ ಎಂದು ಡಾ. ಮಾನಸ ತಿಳಿಸಿದರು. ‘ಮನೆಗೊಂದು ಗ್ರಂಥಾಲಯ’ ಯೋಜನೆಯ ಮೂಲಕ ಜನರಲ್ಲಿಪುಸ್ತಕಾಭಿರುಚಿ ಬೆಳೆಸುವ ಪ್ರಯತ್ನ ನಡೆಯುತ್ತಿದೆ. ಪ್ರಾಧಿಕಾರವು ಈವರೆಗೆ 769ಕ್ಕೂ ಹೆಚ್ಚು ಮೌಲಿಕ ಸಾಹಿತ್ಯ ಕೃತಿಗಳನ್ನು ಪ್ರಕಟಿಸಿದ್ದು, ಸಿರಿಗನ್ನಡ ಮಾರಾಟ ಮಳಿಗೆ ಹಾಗೂ ಆನ್ ಲೈನ್ ಮೂಲಕ ಮಾರಾಟ ಮಾಡುತ್ತಿದೆ.

ಕನ್ನಡದ ಪ್ರಮುಖ ಸಾಹಿತಿಗಳ ಸಮಗ್ರ ಸಾಹಿತ್ಯ ಸಂಪುಟಗಳನ್ನು ಪ್ರಕಟಿಸುವ ಕಾರ್ಯವೂ ಮುಂದುವರಿದಿದೆ. ಮೈಸೂರು, ವಿಜಯನಗರ, ಕಲಬುರಗಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿಸಮಗ್ರ ಸಾಹಿತ್ಯ ಸಂಪುಟಗಳ ಬಿಡುಗಡೆ ಹಾಗೂ ಪುಸ್ತಕಾಭಿರುಚಿ ಕಾರ್ಯಕ್ರಮಗಳನ್ನು ಆಯೋಜಿಸಿರುವ ಪ್ರಾಧಿಕಾರ, ಇದೀಗ ತುಮಕೂರಿನಲ್ಲಿಪಿ.ಆರ್ . ತಿಪ್ಪೇಸ್ವಾಮಿ ಅವರ ಸಮಗ್ರ ಸಾಹಿತ್ಯ ಸಂಪುಟಗಳನ್ನು ಲೋಕಾರ್ಪಣೆ ಮಾಡುತ್ತಿದೆ ಎಂದು ಹೇಳಿದರು.

ಫೋಟೋ 16ಕೆಜಿಎಚ್ 2: ತುಮಕೂರು ನಗರದ ಪತ್ರಿಕಾ ಭವನದಲ್ಲಿಬುಧವಾರ ಸುದ್ದಿಗೋಷ್ಠಿಯಲ್ಲಿಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಮಾನಸ ಮಾತನಾಡಿದರು.