ಜಿಲ್ಲೆಯ 30 ಕಿ.ಮೀ. ವ್ಯಾಪ್ತಿಯಲ್ಲಿಕೆಲವೆಡೆ ಬುಧವಾರ ಮಧ್ಯಾಹ್ನ 1.48ಕ್ಕೆ ಲಘು ಭೂಕಂಪನದ ಅನುಭವವಾಗಿದೆ. ರಾಷ್ಟ್ರೀಯ ಭೂಕಂಪನಶಾಸ್ತ್ರ ಕೇಂದ್ರದ ಮಾಹಿತಿ ಪ್ರಕಾರ, ರಿಕ್ಟರ್ ಮಾಪಕದಲ್ಲಿ2.5 ತೀವ್ರತೆ ದಾಖಲಾಗಿದೆ.
ಭೂಕಂಪನದ ಕೇಂದ್ರವು ಭೂಮಿಯ ಸುಮಾರು 5 ಕಿ.ಮೀ. ಆಳದಲ್ಲಿತ್ತು ಎಂದು ತಿಳಿದುಬಂದಿದೆ. ಕಂಪನದ ತೀವ್ರತೆ ಅತ್ಯಂತ ಕಡಿಮೆಯಾಗಿದ್ದರಿಂದ ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿ ನಷ್ಟ ಸಂಭವಿಸಿಲ್ಲಎಂದು ಅಧಿಕಾರಿಗಳು ತಿಳಿಸಿದ್ದಾರೆ.