ರಾಯಚೂರು: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ (ಆರ್ ಸೆಟಿ)ಯಿಂದ ಗ್ರಾಮೀಣ ನಿರುದ್ಯೋಗಿ ಮಹಿಳೆಯರಿಗೆ ಟೈಲರಿಂಗ್ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ತರಬೇತಿ ಸೆ.21ರಿಂದ ಪ್ರಾರಂಭವಾಗಿ 31ದಿನ ನಡೆಯಲಿದೆ. ತರಬೇತಿ ಅವಧಿಯಲ್ಲಿಅಭ್ಯರ್ಥಿಗಳಿಗೆ ಉಚಿತ ಊಟ ಹಾಗೂ ಉಚಿತ ವಸತಿ ಸೌಕರ್ಯ ವ್ಯವಸ್ಥೆ ಇರುತ್ತದೆ. ಆಸಕ್ತರು ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ (ಆರ್ ಸೆಟಿ), ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಥವಾ ಮೊ.8217382735, 9742470999ಗೆ ಸಂಪರ್ಕಿಸಬಹುದು ಎಂದು ಸಂಸ್ಥೆಯ ನಿರ್ದೇಶಕ ವಿಜಯಕುಮಾರ್ ಬಡಿಗೇರ ಪ್ರಕಟಣೆಯಲ್ಲಿತಿಳಿಸಿದ್ದಾರೆ.