ಮಹಿಳೆಯರು ಆತ್ಮ ವಿಶ್ವಾಸದಿಂದ ಮುನ್ನಡೆಯಲಿ

Contributed bysidramappasn@gmail.com|Vijaya Karnataka
womens confidence and achievements highlighted by dharmasthala initiative
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕಿ ಗೀತಾ

ಮಹಿಳೆಯರು ಆತ್ಮ ವಿಶ್ವಾಸದಿಂದ ಮುನ್ನಡೆಯಲಿ
ವಿಕ ಸುದ್ದಿಲೋಕ ತರೀಕೆರೆ

ಮಹಿಳೆಯರು ಆತ್ಮ ವಿಶ್ವಾಸದಿಂದ ಮುನ್ನಡೆದರೆ ಯಶಸ್ಸು ಸಾಧ್ಯ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಚಿತ್ರದುರ್ಗ ಪ್ರಾದೇಶಿಕ ನಿರ್ದೇಶಕಿ ಗೀತಾ ಹೇಳಿದರು.

ಅವರು ಪಟ್ಟಣದ ಶ್ರೀ ಬೀರಲಿಂಗೇಶ್ವರ ಸಮುದಾಯ ಭವನದಲ್ಲಿಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಆಯೋಜಿಸಿದ್ದ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಉದ್ಘಾಟಿಸಿ ಮಾತನಾಡಿದರು.

ಮಹಿಳೆಯರ ಸಬಲೀಕರಣಕ್ಕಾಗಿ ರಾಜ್ಯದ ಎಲ್ಲಾತಾಲೂಕುಗಳಲ್ಲಿಈ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಮಹಿಳಾ ಸಬಲೀಕರಣ, ಆರ್ಥಿಕ ಸ್ವಾವಲಂಬನೆ , ಸಾಮಾಜಿಕ ಜಾಗೃತಿ , ಕಾನೂನು ಅರಿವು ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಪ್ರತಿ ಕೇಂದ್ರದಲ್ಲಿಯೂ ನಡೆಸಲಾಗುತ್ತಿದೆ ಎಂದರು.

ಜಿ.ಎಚ್ .ಶ್ರೀನಿವಾಸ ಜನಹಿತ ಸೇವಾ ಟ್ರಸ್ಟ್ ನ ವಾಣಿ ಶ್ರೀನಿವಾಸ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳು ರಾಜ್ಯಕ್ಕೆ ಮಾದರಿಯಾಗಿದ್ದು, ಮಹಿಳೆಯರು ಕಾರ್ಯಕ್ರಮ ಸದ್ಬಳಕೆ ಮಾಡಿಕೊಳ್ಳಬೇಕು, ಸ್ವಾವಲಂಬಿಗಳಾಗಿ ಮುನ್ನಡೆಯಬೇಕು ಎಂದು ಹೇಳಿದರು.

ಪ್ರಾಂಶುಪಾಲರಾದ ಜಿ.ವಿ.ಭಾಗ್ಯ ಮಾತನಾಡಿ, ಮಕ್ಕಳ ಪಾಲನೆ, ಪೋಷಣೆ, ಶಿಕ್ಷಣ, ಸಂಸ್ಕಾರ ಹಾಗೂ ಕುಟುಂಬದ ಆರ್ಥಿಕ ನಿರ್ವಹಣೆಯಲ್ಲಿಮಹಿಳೆಯರ ಪಾತ್ರ ಅಪಾರ ಎಂದರು.

ಕನ್ನಡ ಜಾನಪದ ಪರಿಷತ್ ಜಿಲ್ಲಾಧ್ಯಕ್ಷೆ ಎಂ.ಎಸ್ .ವಿಶಾಲಾಕ್ಷಮ್ಮ ಮಾತನಾಡಿದರು. ಸಂಘಗಳ ಸದಸ್ಯರ ಮಕ್ಕಳಿಗೆ ಸುಜ್ಞಾನನಿಧಿ ಶಿಷ್ಯವೇತನ ಮಂಜೂರಾತಿ ಪತ್ರಗಳನ್ನು ವಿತರಿಸಲಾಯಿತು. ತಾಲೂಕು ಯೋಜನಾಧಿಕಾರಿ ಸದಾಶಿವಗೌಡ ಪ್ರಾಸ್ತಾವಿಕವಾಗಿ ಮಾತನಾಡಿದರು.

ಪುರಸಭೆ ಉಪಾಧ್ಯಕ್ಷೆ ಶಮೀಮ್ ಬಾನು, ಜ್ಞಾನವಿಕಾಸ ಸಮನ್ವಯಾಧಿಕಾರಿ ಸವಿತಾ ಹಾಗೂ ಇತರರಿದ್ದರು.

13ತರೀಕೆರೆ2:

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಪಟ್ಟಣದಲ್ಲಿಆಯೋಜಿಸಿದ್ದ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮವನ್ನು ಚಿತ್ರದುರ್ಗ ಪ್ರಾದೇಶಿಕ ನಿರ್ದೇಶಕಿ ಗೀತಾ ಉದ್ಘಾಟಿಸಿದರು. ತಾಲೂಕು ಯೋಜನಾಧಿಕಾರಿ ಸದಾಶಿವಗೌಡ ಇದ್ದರು.