ಹಾವೇರಿ: ಬಾಲಕರಿಗೆ ‘ಹೊಯ್ಸಳ’ ಮತ್ತು ಬಾಲಕಿಯರಿಗೆ ‘ಕೆಳದಿ ಚೆನ್ನಮ್ಮ’ ಶೌರ್ಯ ಪ್ರಶಸ್ತಿ ಹಾಗೂ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿಕನಿಷ್ಠ 5 ವರ್ಷಗಳ ಸೇವೆ ಸಲ್ಲಿಸಿದ ವ್ಯಕ್ತಿ ಮತ್ತು ಸಂಸ್ಥೆಗಳಿಗೆ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ರಾಜ್ಯ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಮಕ್ಕಳ ದಿನಾಚರಣೆ 2026ರ ಪ್ರಯುಕ್ತ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯಸಾಹಸ ಪ್ರದರ್ಶಿಸಿದ 6 ರಿಂದ 18 ವರ್ಷದೊಳಗಿನ ಬಾಲಕರಿಗೆ ಹೊಯ್ಸಳ ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಪ್ರಕರಣವು 2025 ಆ.1 ರಿಂದ 2026 ಜು.1ರೊಳಗೆ ನಡೆದಿರಬೇಕು. 2007 ಆ.1ರಂದು ಹಾಗೂ ನಂತರ ಜನಿಸಿದ ಮಕ್ಕಳು ಈ ಪ್ರಶಸ್ತಿಗೆ ಅರ್ಹರಾಗಿರುತ್ತಾರೆ. ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ತಲಾ 10 ಸಾವಿರ ರೂ. ಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಲಾಗುತ್ತದೆ.ಇದೇ ಸಂದರ್ಭದಲ್ಲಿಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿಕನಿಷ್ಠ 5 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ ತಲಾ 25 ಸಾವಿರ ರೂ. ಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ ಸಂಸ್ಥೆಗಳಿಗೆ ತಲಾ ರೂ.1.00ಲಕ್ಷದಂತೆ ನಗದು ಬಹುಮಾನ ಮತ್ತು ಪ್ರಶಸ್ತಿ ನೀಡಿ ಗೌರವಿಸಲಾಗುವುದು. ನಿಗದಿತ ಅರ್ಜಿ ನಮೂನೆಗಳನ್ನು ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಾವೇರಿ ಈ ವಿಳಾಸದಲ್ಲಿಪಡೆದು ಕನ್ನಡ ಭಾಷೆಯಲ್ಲಿಭರ್ತಿ ಮಾಡಿ ಅರ್ಜಿಯನ್ನು ಸೆ.21 ರೊಳಗೆ ಸಲ್ಲಿಸಬೇಕು. ನಂತರ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿತಿಳಿಸಿದ್ದಾರೆ.