ಹುಬ್ಬಳ್ಳಿ: ಲ್ಯಾಮಿಂಗ್ಟನ್ ರಸ್ತೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಭವನದಲ್ಲಿಸೆ.20ರಂದು ಬೆಳಗ್ಗೆ 11ಕ್ಕೆ ಅಧಿಕಾರ ಹಸ್ತಾಂತರ ಸಮಾರಂಭ ನಡೆಯಲಿದೆ.ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ ನಿಕಟಪೂರ್ವ ಜಿಲ್ಲಾಧ್ಯಕ್ಷ ಅಲ್ತಾಫಹುಸೇನ ಹಳ್ಳೂರ ಅವರಿಂದ ಹುಧಾ ಮಹಾನಗರ ಜಿಲ್ಲೆಯ ನೂತನ ಜಿಲ್ಲಾಧ್ಯಕ್ಷರಾಗಿ ಸಾರಥ್ಯವನ್ನು ವಹಿಸಿಕೊಂಡಿರುವ ಯುವ ಮುಖಂಡ ಸದಾನಂದ ವಿ.ಡಂಗನವರ ಅಧಿಕಾರ ಸ್ವೀಕರಿಸಲಿದ್ದಾರೆ. ಅದೇ ರೀತಿ ಧಾರವಾಡ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿ ನಿಕಟಪೂರ್ವ ಅಧ್ಯಕ್ಷ ಅನಿಲಕುಮಾರ್ ಪಾಟೀಲ್ ಅವರಿಂದ ಗ್ರಾಮೀಣ ಜಿಲ್ಲೆಯ ನೂತನ ಅಧ್ಯಕ್ಷರಾಗಿ ಸಾರಥ್ಯ ವಹಿಸಿಕೊಂಡ ಚಂದ್ರಶೇಖರ ಜುಟ್ಟಲ್ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.