ವಿಕ ಸುದ್ದಿಲೋಕ ವಿಟ್ಲವಿಟ್ಲಹೋಬಳಿ ಮಟ್ಟದ ಜನಾಂದೋಲನ ಸಭೆ ಕೆಲಿಂಜ ಶ್ರೀನಿಕೇತನ ಮಂದಿರದಲ್ಲಿಶನಿವಾರ ನಡೆಯಿತು.
ಬಂಟ್ವಾಳ ಶಾಸಕ ರಾಜೇಶ್ ನಾಯ್ ್ಕ ಉಳಿಪ್ಪಾಡಿ ಸಭೆ ಉದ್ಘಾಟಿಸಿದರು. ನಾನಾ ಗ್ರಾಮಗಳ ಸಾರ್ವಜನಿಕರಿಂದ ಕಂದಾಯ, ರಸ್ತೆ, ಸಾರಿಗೆ, ಪಡಿತರ ಚೀಟಿ ಸೇರಿದಂತೆ ಮೂಲಸೌಕರ್ಯ ಹಾಗೂ ವೈಯಕ್ತಿಕ ಸಮಸ್ಯೆಗಳಿಗೆ ಸಂಬಂಧಿಸಿದ 68ಕ್ಕೂ ಅಧಿಕ ಅರ್ಜಿಗಳನ್ನು ಸ್ವೀಕರಿಸಲಾಯಿತು. ಬಹುತೇಕ ಅರ್ಜಿಗಳು ಕಂದಾಯ ಇಲಾಖೆಗೆ ಸಂಬಂಧಿಸಿದ್ದವು.
ಶಾಸಕ ರಾಜೇಶ್ ನಾಯ್ ್ಕ ಉಳಿಪ್ಪಾಡಿಗುತ್ತು ಮಾತನಾಡಿ, ಜನರ ಬಳಿಗೆ ತೆರಳಿ ಸಮಸ್ಯೆ ಆಲಿಸುವ ಉದ್ದೇಶದಿಂದ ಇಂತಹ ಜನಾಂದೋಲನ ಸಭೆಗಳನ್ನು ನಡೆಸಲಾಗುತ್ತಿದೆ. ಸಾರ್ವಜನಿಕರು ಸಲ್ಲಿಸುವ ಪ್ರತಿಯೊಂದು ಮನವಿಯನ್ನೂ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು, ನಿಯಮಾನುಸಾರ ಸಾಧ್ಯವಿರುವ ಪರಿಹಾರ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಪ್ರತ್ಯೇಕ ವಿಟ್ಲತಾಲೂಕಿಗೆ ಮನವಿ:
ವಿಟ್ಲತಾಲೂಕು ಹಾಗೂ ವಿಧಾನಸಭಾ ಕ್ಷೇತ್ರ ಮರುಸ್ಥಾಪನಾ ಹೋರಾಟ ಸಮಿತಿ ವತಿಯಿಂದ ವಿಟ್ಲವನ್ನು ಪ್ರತ್ಯೇಕ ತಾಲೂಕಾಗಿ ರಚಿಸುವಂತೆ ಹಾಗೂ ವಿಟ್ಲವಿಧಾನಸಭಾ ಕ್ಷೇತ್ರವನ್ನು ಮರುಸ್ಥಾಪಿಸುವಂತೆ ಮನವಿ ಸಲ್ಲಿಸಲಾಯಿತು. ಸಮಿತಿ ಪರವಾಗಿ ಕಾನ ಈಶ್ವರ ಭಟ್ ಎರಡು ಪ್ರತ್ಯೇಕ ಮನವಿಗಳನ್ನು ಶಾಸಕರಿಗೆ ನೀಡಿದರು.
ಪಹಣಿ, ಜಮೀನು ಅಳತೆ ಸೇರಿದಂತೆ ವಿವಿಧ ಕಂದಾಯ ಸಮಸ್ಯೆಗಳ ಕುರಿತು ಸಾರ್ವಜನಿಕರು ಮನವಿ ಸಲ್ಲಿಸಿದರು. ರೇಷನ್ ಕಾರ್ಡ್ ಸೇರಿ ದಂತೆ ಹಲವು ಅರ್ಜಿಗಳನ್ನು ಸ್ವೀಕರಿಸಲಾಯಿತು.
ರಸ್ತೆ ಬದಿ ತಡೆಗೋಡೆಗೆ ಮನವಿ:
ಕಂಪದಬೈಲು ವೀರಕಂಭ ಪ್ರದೇಶದಲ್ಲಿಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ಪಿಡಬ್ಲ್ಯುಡಿ ರಸ್ತೆಯ ಬದಿಯಲ್ಲಿತಡೆಗೋಡೆ ನಿರ್ಮಿಸಿ ಕೊಡುವಂತೆ ಮನವಿ ಸಲ್ಲಿಸಲಾಯಿತು.
ಹಂದಿ ಸಾಕಣೆ ತ್ಯಾಜ್ಯದಿಂದ ಸಮಸ್ಯೆ:
ಸಜೀಪಮೂಡ ಗ್ರಾಮದ ಮಿತ್ತಕೋಡಿ ವಸತಿ ಪ್ರದೇಶದಲ್ಲಿಹಂದಿ ಸಾಕಣೆಯಿಂದ ಉಂಟಾಗುತ್ತಿರುವ ತ್ಯಾಜ್ಯ ನೀರನ್ನು ಸಮರ್ಪಕ ವ್ಯವಸ್ಥೆ ಇಲ್ಲದೆ ಹೊರಬಿಡಲಾಗುತ್ತಿದೆ. ಇದರಿಂದ ಸ್ಥಳೀಯರಿಗೆ ತೊಂದರೆಯಾಗುತ್ತಿದ್ದು, ಆರೋಗ್ಯದ ಸಮಸ್ಯೆ ಉಂಟಾಗುವ ಆತಂಕವಿದೆ ಎಂದು ಸಾರ್ವಜನಿಕರು ದೂರಿದರು.
ಸಮಸ್ಯೆಗೆ ಪರಿಹಾರ ಕಲ್ಪಿಸುವಂತೆ ಶಾಸಕರಿಗೆ ಮನವಿ ಸಲ್ಲಿಸಲಾಯಿತು. ಈ ಕುರಿತು ಸಂಬಂಧಿಸಿದ ಅಧಿಕಾರಿಗಳಿಗೆ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಶಾಸಕ ರಾಜೇಶ್ ನಾಯ್ ್ಕ ಸೂಚಿಸಿದರು.
ವಿಟ್ಲ-ಮಂಗಳೂರು ಕೆಎಸ್ ಆರ್ ಟಿಸಿ ಬಸ್ ಗೆ ಮನವಿ:
ವಿಟ್ಲದಿಂದ ಮಂಗಳೂರಿಗೆ ಕೆಎಸ್ ಆರ್ ಟಿಸಿ ಬಸ್ ಸೌಲಭ್ಯ ಕಲ್ಪಿಸುವಂತೆ ವೇದಾವತಿ ಮನವಿ ಸಲ್ಲಿಸಿದರು. ವಿದ್ಯಾರ್ಥಿಗಳು, ಉದ್ಯೋಗಿಗಳು ಸೇರಿದಂತೆ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಸೂಕ್ತ ಸಾರಿಗೆ ವ್ಯವಸ್ಥೆ ಕಲ್ಪಿಸುವಂತೆ ಅವರು ಕೋರಿದರು.
ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷೆ ಜಯಂತಿ ಪೂಜಾರಿ, ತಹಶೀಲ್ದಾರ್ ಮಂಜುನಾಥ್ ಉಪಸ್ಥಿತರಿದ್ದರು.