ವಿಕ ಸುದ್ದಿಲೋಕ ಹಾಸನಸಮಾಜದಲ್ಲಿಶಿಸ್ತು, ಸಂಸ್ಕಾರ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸುವಲ್ಲಿಶಿಕ್ಷಕರ ಕೊಡುಗೆ ಅಪಾರವಾಗಿದೆ ಎಂದು ಶಾಸಕ ಸ್ವರೂಪ್ ಪ್ರಕಾಶ್ ಹೇಳಿದರು.
ನಗರದ ಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿಅನುದಾನ ರಹಿತ ಖಾಸಗಿ ಶಾಲೆಗಳ ಆಡಳಿತ ಮಂಡಳಿ ವತಿಯಿಂದ ನಡೆದ ಶಿಕ್ಷಕರ ದಿನಾಚರಣೆ ಕಾರ ್ಯಕ್ರಮದಲ್ಲಿಮಾತನಾಡಿದರು.
‘‘ಶಿಕ್ಷಕರ ಮಾರ್ಗದರ್ಶನದಿಂದ ಅನೇಕ ವಿದ್ಯಾರ್ಥಿಗಳು ಜೀವನದಲ್ಲಿಉನ್ನತ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಶಿಕ್ಷಕರು ಕೇವಲ ಪಾಠ ಬೋಧಿಸುವವರಲ್ಲ, ಉತ್ತಮ ವ್ಯಕ್ತಿತ್ವ ರೂಪಿಸುವ ಮಾರ್ಗದರ್ಶಕರಾಗಿದ್ದಾರೆ. ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ,’’ಎಂದರು.
‘‘ಶಿಕ್ಷಕರು ತಮ್ಮ ವೃತ್ತಿಯನ್ನು ಸೇವಾ ಮನೋಭಾವದಿಂದ ನಿರ್ವಹಿಸುತ್ತಿರುವುದು ಶ್ಲಾಘನೀಯ. ಗ್ರಾಮೀಣ ಭಾಗದ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಎಲ್ಲರೂ ಸಹಕರಿಸಬೇಕು. ಇಂದಿನ ತಂತ್ರಜ್ಞಾನ ಯುಗದಲ್ಲಿಶಿಕ್ಷಣ ಕ್ಷೇತ್ರವೂ ಹಲವು ಬದಲಾವಣೆಗಳನ್ನು ಕಾಣುತ್ತಿದೆ. ಬದಲಾಗುತ್ತಿರುವ ಕಾಲಘಟ್ಟಕ್ಕೆ ಅನುಗುಣವಾಗಿ ಶಿಕ್ಷಕರು ಹೊಸ ಬೋಧನಾ ವಿಧಾನಗಳನ್ನು ಅಳವಡಿಸಿಕೊಳ್ಳಬೇಕು,’’ಎಂದು ಹೇಳಿದರು.
‘‘ವಿದ್ಯಾರ್ಥಿಗಳಲ್ಲಿಪುಸ್ತಕ ಜ್ಞಾನ ಮಾತ್ರವಲ್ಲದೆ ಜೀವನ ಕೌಶಲ್ಯಗಳನ್ನೂ ಬೆಳೆಸಬೇಕು, ಮಕ್ಕಳಲ್ಲಿದೇಶಪ್ರೇಮ, ಪರಿಸರ ಕಾಳಜಿ ಮತ್ತು ಸಾಮಾಜಿಕ ಜವಾಬ್ದಾರಿಯ ಮನೋಭಾವ ಮೂಡಿಸುವ ಕೆಲಸವಾಗಬೇಕು. ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುವುದು ಜನಪ್ರತಿನಿಧಿಗಳ ಜವಾಬ್ದಾರಿಯಾಗಿದೆ.ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಅಗತ್ಯವಿರುವ ಮೂಲಸೌಕರ್ಯ ಕಲ್ಪಿಸಲು ಆದ್ಯತೆ ನೀಡಲಾಗುವುದು,’’ಎಂದು ಭರವಸೆ ನೀಡಿದರು.
‘‘ಶಾಲಾ-ಕಾಲೇಜುಗಳಲ್ಲಿಉತ್ತಮ ಶೈಕ್ಷಣಿಕ ವಾತಾವರಣ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು.ಶಿಕ್ಷಕರು ಮತ್ತು ಪೋಷಕರು ಪರಸ್ಪರ ಸಹಕಾರದಿಂದ ಕೆಲಸ ಮಾಡಿದರೆ ವಿದ್ಯಾರ್ಥಿಗಳ ಭವಿಷ್ಯ ಮತ್ತಷ್ಟು ಉತ್ತಮವಾಗಲಿದೆ,’’ಎಂದು ಹೇಳಿದರು.
ಆದಿಚುಂಚನಗಿರಿ ಶಾಖಾ ಮಠದ ಶ್ರೀಶಂಭುನಾಥ ಸ್ವಾಮೀಜಿ ಕಾರ ್ಯಕ್ರಮ ಉದ್ಘಾಟಿಸಿದರು. ಸಂಘದ ಅಧ್ಯಕ್ಷ ಶಿವರಾಮೇಗೌಡ, ಟೈಮ್ಸ್ ಗಂಗಾಧರ್ , ತಾರಾ ಎಸ್ .ಸುಬ್ಬಸ್ವಾಮಿ ಮತ್ತಿತರರು ಹಾಜರಿದ್ದರು.
ಫೋಟೊ
ಹಾಸನದಲ್ಲಿಖಾಸಗಿ ಶಾಲೆಗಳ ಆಡಳಿತ ಮಂಡಳಿ ವತಿಯಿಂದ ನಡೆದ ಶಿಕ್ಷಕರ ದಿನಾಚರಣೆ ಕಾರ ್ಯಕ್ರಮದಲ್ಲಿಶಾಸಕ ಸ್ವರೂಪ್ ಪ್ರಕಾಶ್ ಮಾತನಾಡಿದರು.