**(ಸ್ಟೋರಿ) ಪುಂಜಾಲಕಟ್ಟೆ-ಚಾರ್ಮಾಡಿ ಹೆದ್ದಾರಿ ಅಭಿವೃದ್ಧಿ ಅಂತಿಮ ಹಂತಕ್ಕೆ ಚರಂಡಿ, ಸರ್ವಿಸ್ ರಸ್ತೆ ಕಾಮಗಾರಿ ಪ್ರಗತಿಯಲ್ಲಿ*ಡಿಸೆಂಬರ್ ನೊಳಗೆ ಕಾಮಗಾರಿ ಪೂರ್ಣ ಸಾಧ್ಯತೆ

Contributed byaravindahebbar1971@gmail.com|Vijaya Karnataka
Vijay Karnataka
ಅರವಿಂದ ಹೆಬ್ಬಾರ್ ಮುಂಡಾಜೆ ಬೆಳ್ತಂಗಡಿ

್ಛಛಿಛಿdಚಿa್ಚkvkಞ್ಞಜಃಜಞaಜ್ಝಿ.್ಚಟಞ
ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಪುಂಜಾಲಕಟ್ಟೆ-ಚಾರ್ಮಾಡಿ ನಡುವಿನ ಸುಮಾರು 32 ಕಿ.ಮೀ. ರಸ್ತೆ ಅಭಿವೃದ್ಧಿ ಕಾಮಗಾರಿ ಅಂತಿಮ ಹಂತ ತಲುಪಿದ್ದು, ಬಹುತೇಕ ಕಾಮಗಾರಿಗಳು ಪೂರ್ಣಗೊಂಡಿವೆ. ಪೇಟೆ ಹಾಗೂ ಜನನಿಬಿಡ ಪ್ರದೇಶಗಳಲ್ಲಿಬಾಕಿ ಉಳಿದಿರುವ ಕಾಮಗಾರಿಗಳಿಗೆ ವೇಗ ನೀಡಲಾಗಿದ್ದು, ಕಟ್ಟಡ, ಮರಗಳ ತೆರವು, ಸರ್ವಿಸ್ ರಸ್ತೆ ನಿರ್ಮಾಣ ಸೇರಿದಂತೆ ವಿವಿಧ ಕೆಲಸಗಳು ಪ್ರಗತಿಯಲ್ಲಿವೆ.

ಪ್ರಮುಖ ಸಂಪರ್ಕ ರಸ್ತೆಯಾಗಿರುವ ಪುಂಜಾಲಕಟ್ಟೆ-ಚಾರ್ಮಾಡಿ ಹೆದ್ದಾರಿಯಲ್ಲಿಪ್ರತಿದಿನ ಸಾವಿರಾರು ವಾಹನಗಳು ಸಂಚರಿಸುತ್ತವೆ. ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿ ಭಾಗವನ್ನು ಘಟ್ಟ ಪ್ರದೇಶದೊಂದಿಗೆ ಸಂಪರ್ಕಿಸುವ ಪ್ರಮುಖ ಮಾರ್ಗವಾಗಿರುವುದರಿಂದ ಈ ರಸ್ತೆಯ ಅಭಿವೃದ್ಧಿಗೆ ಸಾರ್ವಜನಿಕರು ಹಲವು ವರ್ಷಗಳಿಂದ ಒತ್ತಾಯಿಸುತ್ತಿದ್ದರು.

2023ರಲ್ಲಿ700 ಕೋಟಿ ರೂ.ಗೂ ಅಧಿಕ ಅನುದಾನದಲ್ಲಿರಸ್ತೆ ಅಭಿವೃದ್ಧಿ ಕಾಮಗಾರಿ ಆರಂಭಗೊಂಡಿತ್ತು. ಆರಂಭಿಕ ಹಂತದಲ್ಲಿಡಿ.ಪಿ.ಜೈನ್ ಕಂಪನಿಗೆ ಗುತ್ತಿಗೆ ನೀಡಲಾಗಿತ್ತು. ಕಾಮಗಾರಿಯ ಗುಣಮಟ್ಟ ಹಾಗೂ ನಿರ್ವಹಣಾ ವಿಧಾನದ ಕುರಿತು ಸಾರ್ವಜನಿಕರಿಂದ ಆಕ್ಷೇಪಗಳು ವ್ಯಕ್ತವಾಗಿದ್ದವು. ಬಳಿಕ ಒಳಗುತ್ತಿಗೆ ಆಧಾರದಲ್ಲಿಮುಗ್ರೋಡಿ ಕನ್ ಸ್ಟ್ರಕ್ಷನ್ ಸಂಸ್ಥೆಗೆ ಕಾಮಗಾರಿಯ ಜವಾಬ್ದಾರಿ ವಹಿಸಲಾಗಿದ್ದು, ಕಾಮಗಾರಿಗೆ ವೇಗ ದೊರೆತಿದೆ.

ಮಳೆಗಾಲದಲ್ಲಿಸಂಕಷ್ಟ: 2024ರ ಮಳೆಗಾಲದಲ್ಲಿಕಾಮಗಾರಿ ನಡೆಯುತ್ತಿದ್ದ ಸಂದರ್ಭ ಹೆದ್ದಾರಿಯಲ್ಲಿವಾಹನ ಸಂಚಾರಕ್ಕೆ ತೀವ್ರ ತೊಂದರೆ ಉಂಟಾಗಿತ್ತು. ರಸ್ತೆ ತುಂಬಾ ಕೆಸರು, ಗುಂಡಿಗಳು, ಸಂಚಾರ ದಟ್ಟಣೆ ಸೇರಿದಂತೆ ಹಲವು ಸಮಸ್ಯೆಗಳಿಂದ ವಾಹನ ಸವಾರರು ಪರದಾಡುವಂತಾಗಿತ್ತು. ಮಳೆ ಹೆಚ್ಚಾದ ಸಂದರ್ಭ ಸಂಚಾರ ನಿರ್ವಹಣೆಯೂ ಸವಾಲಾಗಿತ್ತು.

ಈ ಹಿನ್ನೆಲೆಯಲ್ಲಿಸಂಸದ ಕ್ಯಾ. ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜ ಕಾಮಗಾರಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ವಾಹನ ಸವಾರರಿಗೆ ಕನಿಷ್ಠ ತೊಂದರೆಯಾಗುವ ರೀತಿಯಲ್ಲಿಕಾಮಗಾರಿ ಕೈಗೊಳ್ಳುವಂತೆ ಸಂಬಂಧಪಟ್ಟವರಿಗೆ ಸೂಚಿಸಿದ್ದರು. ಪ್ರಸ್ತುತ ಬಹುತೇಕ ಭಾಗಗಳಲ್ಲಿಮುಖ್ಯ ಕಾಮಗಾರಿ ಪೂರ್ಣಗೊಂಡಿದೆ. ಪೇಟೆ ಪ್ರದೇಶಗಳಲ್ಲಿರಸ್ತೆ ಅಭಿವೃದ್ಧಿ, ಚರಂಡಿ, ಸರ್ವಿಸ್ ರಸ್ತೆ ಹಾಗೂ ಇತರ ಮೂಲಸೌಕರ್ಯ ಕಾಮಗಾರಿಗಳು ಬಾಕಿ ಉಳಿದಿವೆ. ರಸ್ತೆ ವಿಸ್ತರಣೆಗೆ ಅಡ್ಡಿಯಾಗಿದ್ದ ಕೆಲವು ಕಟ್ಟಡಗಳು ಹಾಗೂ ಮರಗಳ ತೆರವು ಕಾರ್ಯ ನಡೆಯುತ್ತಿದೆ. ಬಾಕಿ ಉಳಿದಿರುವ ಕಾಮಗಾರಿ ಶೀಘ್ರ ಪೂರ್ಣಗೊಳಿಸಬೇಕಿದೆ.

ಬಾಕ್ಸ್

ಪಾರ್ಕಿಂಗ್ ಸಮಸ್ಯೆ

ಹೆದ್ದಾರಿ ಅಭಿವೃದ್ಧಿಯಿಂದ ರಸ್ತೆ ವಿಸ್ತರಣೆಗೊಂಡು ವಾಹನ ಸಂಚಾರಕ್ಕೆ ಹೆಚ್ಚಿನ ಸ್ಥಳಾವಕಾಶ ಸಿಕ್ಕಿದ್ದರೂ, ಕೆಲವು ಕಡೆಗಳಲ್ಲಿಬೇಕಾಬಿಟ್ಟಿ ವಾಹನ ನಿಲುಗಡೆ ಸಮಸ್ಯೆಯಾಗಿ ಪರಿಣಮಿಸಿದೆ. ವಿಸ್ತರಣೆಗೊಂಡ ರಸ್ತೆಯ ಬದಿಗಳಲ್ಲಿಕಾರು, ಆಟೊ, ಸರಕು ವಾಹನ ಸೇರಿದಂತೆ ವಿವಿಧ ವಾಹನಗಳನ್ನು ಅಡ್ಡಾದಿಡ್ಡಿ ನಿಲ್ಲಿಸಲಾಗುತ್ತಿದೆ. ಇದರಿಂದ ಲಭ್ಯವಿರುವ ರಸ್ತೆ ಜಾಗ ಕುಗ್ಗುತ್ತಿದ್ದು, ವಾಹನ ಸಂಚಾರಕ್ಕೆ ಅಡಚಣೆಯಾಗುತ್ತಿದೆ.

ಪೇಟೆ ಪ್ರದೇಶಗಳಲ್ಲಿಪಾರ್ಕಿಂಗ್ ವ್ಯವಸ್ಥೆಗೆ ಸೂಕ್ತ ಸ್ಥಳ ಗುರುತಿಸದೆ ರಸ್ತೆ ಬದಿಯಲ್ಲೇ ವಾಹನ ನಿಲ್ಲಿಸುತ್ತಿರುವುದರಿಂದ ಸಮಸ್ಯೆಯಾಗುತ್ತಿದೆ. ಮುಂದಿನ ದಿನಗಳಲ್ಲಿವಾಹನಗಳ ಸಂಖ್ಯೆ ಹೆಚ್ಚಾದಂತೆ ಈ ಸಮಸ್ಯೆ ಮತ್ತಷ್ಟು ಗಂಭೀರವಾಗುವ ಆತಂಕವೂ ಇದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಸ್ಥಳೀಯಾಡಳಿತ ಹಾಗೂ ಪೊಲೀಸ್ ಇಲಾಖೆ ಸಮನ್ವಯದಿಂದ ಪಾರ್ಕಿಂಗ್ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕಿದೆ. ಅಗತ್ಯವಿರುವೆಡೆ ಪಾರ್ಕಿಂಗ್ ಸ್ಥಳ ಗುರುತಿಸಿ, ನೋ ಪಾರ್ಕಿಂಗ್ ಪ್ರದೇಶಗಳಲ್ಲಿವಾಹನ ನಿಲುಗಡೆಗೆ ಕಡಿವಾಣ ಹಾಕಬೇಕು.

ಕೋಟ್

ಸುಮಾರು 28.5 ಕಿ.ಮೀ. ವ್ಯಾಪ್ತಿಯ ಕಾಮಗಾರಿ ಪೂರ್ಣಗೊಂಡಿದೆ. ಇನ್ನುಳಿದ ಪ್ರದೇಶಗಳಲ್ಲಿಕಾಮಗಾರಿ ಭರದಿಂದ ನಡೆಯುತ್ತಿದೆ. ಕೆಲವು ಕಡೆ ರಸ್ತೆ ಅಭಿವೃದ್ಧಿಯಾಗಿದ್ದು, ಸಣ್ಣಪುಟ್ಟ ಕಾಮಗಾರಿಗಳು ನಡೆಯಬೇಕಿವೆ. ಕಾಮಗಾರಿ ಉತ್ತಮ ರೀತಿಯಲ್ಲಿಸಾಗುತ್ತಿದ್ದು, ಡಿಸೆಂಬರ್ ನೊಳಗೆ ಕಾಮಗಾರಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಲಾಗಿದೆ.

-ಚಂದ್ರಶೇಖರ್ ಕೆ.ಟಿ., ಇಇ, ರಾಷ್ಟ್ರೀಯ ಹೆದ್ದಾರಿ ಇಲಾಖೆ, ದ.ಕ.

ಪೊಟೋ: 20ಎಂಜೆ ಹೆದ್ದಾರಿ 1

ಸರ್ವಿಸ್ ರಸ್ತೆಯಲ್ಲಿವಾಹನ ಪಾರ್ಕಿಂಗ್

ಪೊಟೋ: 20ಎಂಜೆ ಹೆದ್ದಾರಿ 2

ಉಜಿರೆಯಲ್ಲಿಸರ್ವಿಸ್ ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿರುವುದು.