ಹಿಮಾಚಲ ಪ್ರದೇಶದಲ್ಲಿ ಮುಂಗಾರು ಮಳೆ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ರಾಜ್ಯಾದ್ಯಂತ 60 ರಸ್ತೆಗಳು ಬಂದ್ ಆಗಿದ್ದು, ಹಲವು ಜಿಲ್ಲೆಗಳಲ್ಲಿಒಟ್ಟು 48 ಟ್ರಾನ್ಸ್ ಫಾರ್ಮರ್ ಗಳು ಹಾನಿಗೊಳಗಾಗಿವೆ. ಡಜನ್ ಗಟ್ಟಲೆ ಕುಡಿಯುವ ನೀರು ಸರಬರಾಜು ಯೋಜನೆಗಳು ಸ್ಥಗಿತಗೊಂಡಿವೆ ಎಂದು ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ ತಿಳಿಸಿದೆ. ಇದುವರೆಗೆ ಸುಮಾರು 69.65 ಲಕ್ಷ ರೂ. ಮೌಲ್ಯದ ಖಾಸಗಿ ಆಸ್ತಿಪಾಸ್ತಿ ನಷ್ಟವಾಗಿದೆ. ಕಳೆದ 24 ಗಂಟೆಗಳಲ್ಲಿವ್ಯಾಪಕ ಮಳೆ ಮತ್ತು ಸ್ಥಳೀಯ ಹವಾಮಾನ ವೈಪರೀತ್ಯದ ಘಟನೆಗಳು ಸಾರಿಗೆ ಮತ್ತು ಅಗತ್ಯ ಸೇವೆಗಳ ಮೇಲೆ ತೀವ್ರ ಪರಿಣಾಮ ಬೀರಿದ್ದು, ಪ್ರಯಾಣಿಕರು ಎಚ್ಚರಿಕೆ ವಹಿಸುವಂತೆ ಮತ್ತು ಸಂಚಾರ ಮಾರ್ಗಸೂಚಿಗಳನ್ನು ಪಾಲಿಸುವಂತೆ ಸೂಚಿಸಲಾಗಿದೆ.