ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ರಾಜ್ಯ ಕಾರಾಗೃಹ ಇಲಾಖೆಯಲ್ಲಿನ 560 ವೀಕ್ಷಕರು(ವಾರ್ಡರ್ ), 16 ದ್ವಿತೀಯ ದರ್ಜೆ ಬೋಧಕರು ಸೇರಿದಂತೆ ಒಟ್ಟು 576 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಸೆ.19 ರಿಂದ ಅ.15ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ವಾರ್ಡರ್ ಹುದ್ದೆಗೆ ಎಸ್ಸೆಸ್ಸೆಲ್ಸಿ ವಿದ್ಯಾರ್ಹತೆ ನಿಗದಿಪಡಿಸಲಾಗಿದೆ. ದ್ವಿತೀಯ ದರ್ಜೆ ಬೋಧಕ ಹುದ್ದೆ ಗಳಿಗೆ ಎಸ್ಸೆಸ್ಸೆಲ್ಸಿ ಅಥವಾ ತತ್ಸಮಾನ ವಿದ್ಯಾರ್ಹತೆಯ ಜತೆಗೆ, ಮೆಕ್ಯಾನಿಕಲ್ , ಎಲೆಕ್ಟ್ರಿಕಲ್ , ಟೈಲರಿಂಗ್ ಸೇರಿ ನಾನಾ ವಿಷಯ ಗಳಲ್ಲಿಡಿಪ್ಲೊಮಾ ಪಡೆದಿರಬೇಕು ಎಂದು ತಿಳಿಸಲಾಗಿದೆ. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದಂದು ನಿಗದಿತ ವಿದ್ಯಾರ್ಹತೆ ಪಡೆಯಲು ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳು ಅರ್ಹರಾಗಿರುವುದಿಲ್ಲಎಂದು ಪ್ರಾಧಿಕಾರ ತಿಳಿಸಿದೆ. ವಯೋಮಿತಿ : ಅರ್ಜಿ ಸ್ವೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗೆ ಕನಿಷ್ಠ 20 ವರ್ಷ ತುಂಬಿರಬೇಕು. ಸರಕಾರದ ಇತ್ತೀಚಿನ ಆದೇಶದಂತೆ ಒಂದು ಬಾರಿಗೆ ಅನ್ವಯವಾಗುವಂತೆ ಗರಿಷ್ಠ ವಯೋಮಿತಿಧಿಯಲ್ಲಿ5 ವರ್ಷ ಸಡಿಲಿಕೆ ನೀಡಲಾಗಿದ್ದು, ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 31 ವರ್ಷ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, 2ಎ, 2ಬಿ, 3ಎ ಹಾಗೂ 3ಬಿ ಅಭ್ಯರ್ಥಿಧಿಗಳಿಗೆ 33 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ.