ಶಿವಮೊಗ್ಗ: ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿಸೆ.23 ರಂದು ವಿದ್ಯುತ್ ಕಂಬ ತೆರವುಗೊಳಿಸುವ ಕಾಮಗಾರಿ ಹಮ್ಮಿಕೊಂಡಿದ್ದು, ಬೆಳಗ್ಗೆ 10 ರಿಂದ ಮಧ್ಯಾಹ್ನ 3 ರವರೆಗೆ ಟ್ಯಾಂಕ್ ಮೊಹಲ್ಲಾ, ಬಾಪೂಜಿನಗರ, ಸೋಮಯ್ಯ ಲೇಔಟ್ ಹಾಗೂ ಸುತ್ತಲಿನ ಪ್ರದೇಶಗಳಲ್ಲಿವಿದ್ಯುತ್ ವ್ಯತ್ಯಯವಾಗಲಿದೆ.ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ಫೀಡರ್ ಎ.ಎಫ್ -3 ಮತ್ತು 4ರ ವ್ಯಾಪ್ತಿಯಲ್ಲಿಸೆ.23 ರಂದು ತುರ್ತು ಕಾಮಗಾರಿ ಹಮ್ಮಿಕೊಂಡಿದ್ದು, ಮಧ್ಯಾಹ್ನ 1 ರಿಂದ ಸಂಜೆ 4 ರವರೆಗೆ ಜಡ್ಜ್ ಕ್ವಾಟ್ರಸ್ , ಎಸ್ .ವಿ.ಬಡಾವಣೆ ಎ.ಬಿ.ಸಿ.ಬ್ಲಾಕ್ , ಪೊಲೀಸ್ ಲೇಔಟ್ , ವೃದ್ದಾಶ್ರಮ ಸುತ್ತಮುತ್ತ, ಅಯ್ಯಪ್ಪಸ್ವಾಮಿ ದೇವಸ್ಥಾನ, ಗಾಡಿಕೊಪ್ಪ, ಮಲ್ಲಿಗೇನಹಳ್ಳಿ, ನಂಜಪ್ಪ ಲೈಫ್ ಕೇರ್ , ಹಾಗೂ ಸುತ್ತಲಿನ ಪ್ರದೇಶಗಳಲ್ಲಿವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.