ವಿಕ ಸುದ್ದಿಲೋಕ ಕುರುಗೋಡು‘‘ಪಟ್ಟಣದ ಸ್ವಚ್ಛತೆ ಹಾಗೂ ಆರೋಗ್ಯಕರ ಪರಿಸರ ಸಂರಕ್ಷಣೆಯ ಕಾಯಕದಲ್ಲಿಪ್ರತಿದಿನ ನಿಸ್ವಾರ್ಥದಿಂದ ಶ್ರಮಿಸುವ ಪೌರಕಾರ್ಮಿಕರ ಸೇವೆ ಅತ್ಯಂತ ಮಹತ್ವದ್ದಾಗಿದೆ,’’ ಎಂದು ತಹಸೀಲ್ದಾರ್ ನರಸಪ್ಪ ಹೇಳಿದರು.
ಪಟ್ಟಣದ ಪುರಸಭೆ ಕಚೇರಿಯ ಮುಂಭಾಗ ಪುರಸಭೆಯಿಂದ ಬುಧವಾರ ಹಮ್ಮಿಕೊಂಡಿದ್ದ ‘ಪೌರ ಕಾರ್ಮಿಕರ ದಿನಾಚರಣೆ’ ಕಾರ್ಯಕ್ರಮದಲ್ಲಿಮಾತನಾಡಿದರು.
‘‘ಪಟ್ಟಣದ ನೈರ್ಮಲ್ಯ ಕಾಪಾಡಿ ಜನರ ಆರೋಗ್ಯ ಸುಧಾರಣೆಗೆ ಶ್ರಮಿಸುವ ಪೌರ ಕಾರ್ಮಿಕರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಕೆಲಸ ಆಗಬೇಕು,’’ ಎಂದರು.
ಪುರಸಭೆ ಅಧ್ಯಕ್ಷ ಜಿ.ಮಂಜುನಾಥ ಮಾತನಾಡಿ, ‘‘ಪ್ರತಿದಿನ ಬೆಳಗ್ಗೆ ಚಳಿ, ಗಾಳಿ, ಮಳೆಗೆ ಜಗ್ಗದೆ ತಮ್ಮ ಕಾಯಕದಲ್ಲಿತೊಡಗುವ ಪೌರ ಕಾರ್ಮಿಕರ ಶ್ರಮ ಸ್ಮರಣೀಯ. ಕೊರೊನಾ ಸಂಕಷ್ಟದ ಸಮಯದಲ್ಲೂಅವರ ಸೇವೆ ಅಪರಿಮಿತವಾಗಿತ್ತು. ಸರಕಾರದಿಂದ ಪೌರಕಾರ್ಮಿಕರಿಗೆ ಸಿಗುವ ಸೌಲಭ್ಯ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ,’’ ಎಂದರು.
ಪೌರ ಕಾರ್ಮಿಕರಿಗೆ ಗೌರವ ಪೂರ್ವಕವಾಗಿ ಸನ್ಮಾನಿಸಲಾಯಿತು. ಪುರಸಭೆ ಮುಖ್ಯಾಧಿಕಾರಿ ದತ್ತಾತ್ರೇಯ ಹೆಗಡೆ, ಉಪಾಧ್ಯಕ್ಷರಾದ ನಾಗವೇಣಿ ಆಂಜಿನಪ್ಪ, ಪುರಸಭೆ ಸದಸ್ಯರು, ಪೌರಕಾರ್ಮಿಕರು ಹಾಗೂ ಸಿಬ್ಬಂದಿ ಇದ್ದರು
* ಪೋಟೋ : ಬಿಎಲ್ ವೈ23ಕೆಜಿಡಿ01 :
ಕುರುಗೋಡು ಪಟ್ಟಣದಲ್ಲಿಹಮ್ಮಿಕೊಂಡಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿತಹಸೀಲ್ದಾರ್ ನರಸಪ್ಪ ಮಾತನಾಡಿದರು.