ವಿಕ ಸುದ್ದಿಲೋಕ ಹೊಸಪೇಟೆ (ವಿಜಯನಗರ)ನಗರದ ಥಿಯೋಸಾಫಿಕಲ್ ಮಹಿಳಾ ಕಾಲೇಜಿನ ಮತದಾರರ ಸಾಕ್ಷರತಾ ಕ್ಲಬ್ ನಿಂದ ಮತದಾರರ ಜಾಗೃತಿ
ಅಭಿಯಾನ ಕಾರ್ಯಕ್ರಮದಡಿ ಗುರುವಾರ ರಸಪ್ರಶ್ನೆ ಸ್ಪರ್ಧೆ ಆಯೋಜಿಸಲಾಗಿತ್ತು.
ಸಂವಿಧಾನ, ಚುನಾವಣಾ ಆಯೋಗ , ಚುನಾವಣೆ ಮತ್ತು ಮತದಾನ ವಿಷಯಗಳಿಗೆ ಸಂಬಂಧಿಸಿದಂತೆ ವಿದ್ಯಾರ್ಥಿನಿಯರಿಗಾಗಿ ಬಹು ಆಯ್ಕೆಯ ಪ್ರಶ್ನೆಗಳ ರಸಪ್ರಶ್ನೆ ಸ್ಪರ್ಧೆ ನಡೆಸಲಾಯಿತು. ಸ್ಪರ್ಧೆಯಲ್ಲಿಕಾಲೇಜಿನ ಒಟ್ಟು 31 ವಿದ್ಯಾರ್ಥಿನಿಯರು ಭಾಗವಹಿಸಿ ತಮ್ಮ ಪ್ರತಿಭೆ ಪ್ರದರ್ಶಿಸಿದರು. ‘‘ಸ್ಪರ್ಧೆಯಲ್ಲಿಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದ ವಿದ್ಯಾರ್ಥಿನಿಯರನ್ನು ರಾಷ್ಟ್ರೀಯ ಮತದಾರರ ದಿನಾಚರಣೆ ನಿಮಿತ್ತ ಏರ್ಪಡಿಸಲಾಗುವ ತಾಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆ ಮಾಡಿ ಕಳುಹಿಸಲಾಗುವುದು,’’ ಎಂದು ಕ್ಲಬ್ ನ ಸಂಚಾಲಕರು ಹಾಗೂ ರಾಜ್ಯಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಡಾ.ಕಿಚಿಡಿ ಚನ್ನಪ್ಪ ತಿಳಿಸಿದರು.
ಫೋಟೋ ಕ್ಯಾಪ್ಷನ್ : 2ಜಯಪ್ಪ08
ಹೊಸಪೇಟೆಯ ಥಿಯೋಸಾಫಿಕಲ್ ಮಹಿಳಾ ಕಾಲೇಜಿನಲ್ಲಿಮತದಾರರ ಸಾಕ್ಷರತಾ ಕ್ಲಬ್ ವತಿಯಿಂದ ಹಮ್ಮಿಕೊಂಡಿದ್ದ ರಸಪ್ರಶ್ನೆ ಸ್ಪರ್ಧೆಯಲ್ಲಿಭಾಗವಹಿಸಿದ್ದ ವಿದ್ಯಾರ್ಥಿನಿಯರು.