4ನೇ ಹಂತದ ಕೆರೆಗಳಿಗೆ ನೀರು: ಪೈಪ್ ಲೈನ್ ಕಾಮಗಾರಿಗೆ ಸರ್ವೆ

Contributed by: maheshmadahalli.vk@gmail.com|Vijaya Karnataka•
water supply to 110 ponds in gundlupete new pipeline work initiated
4ನೇ ಹಂತದ ಕೆರೆಗಳಿಗೆ ನೀರು: ಪೈಪ್ ಲೈನ್ ಕಾಮಗಾರಿಗೆ ಸರ್ವೆ

*ಗುಂಡ್ಲುಪೇಟೆ ತಾಲೂಕಿನ 110 ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆ
ವಿಕಸುದ್ದಿಲೋಕ ಗುಂಡ್ಲುಪೇಟೆ

ತಾಲೂಕಿನ 110 ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ 4ನೇ ಹಂತದ ಕೆರೆಗಳಿಗೆ ಪೈಪ್ ಲೈನ್ ನಿರ್ಮಿಸಲು ಸರ್ವೆ ಕಾರ್ಯಕ್ಕೆ ಶಾಸಕ ಎಚ್ .ಎಂ.ಗಣೇಶ್ ಪ್ರಸಾದ್ ಅವರ ಸೂಚನೆಯಂತೆ ಚಾಲನೆ ದೊರೆತಿದೆ.

‘‘ ಪ್ರಸ್ತುತ ಪ್ರಾಕೃತಿಕ ಮಾರ್ಗಗಳಲ್ಲಿ(ಗ್ರಾವಿಟಿ)ಕೆರೆಗಳಿಗೆ ನೀರು ಹರಿಸುವ ವ್ಯವಸ್ಥೆಯಲ್ಲಿಹಲವು ತಾಂತ್ರಿಕ ಸಮಸ್ಯೆಗಳು ಎದುರಾಗುತ್ತಿವೆ. ಹೀಗಾಗಿ ಸಮರ್ಪಕವಾಗಿ ಕೆರೆ-ಕಟ್ಟೆಗಳಿಗೆ ನೀರು ಹರಿಸಲು ಸಾಧ್ಯವಾಗುತ್ತಿಲ್ಲ. ಇದರಿಂದ ನೀರಿಲ್ಲದೇ ರೈತರು ಮತ್ತು ಜನಸಾಮಾನ್ಯರು ಸಂಕಷ್ಟ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿಪೈಪ್ ಲೈನ್ ಮೂಲಕ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಶಾಸ್ವತ ವ್ಯವಸ್ಥೆ ರೂಪಿಸುವ ಉದ್ದೇಶದಿಂದ ಕ್ರಮ ಕೈಗೊಳ್ಳಲಾಗಿದೆ’’ ಎಂದು ಶಾಸಕರು ತಿಳಿಸಿದ್ದಾರೆ.

‘‘4ನೇ ಹಂತದ ಕೆರೆಗಳಿಗೆ ಪೈಪ್ ಲೈನ್ ಅಳವಡಿಸುವ ಕಾಮಗಾರಿಯನ್ನು ಆದಷ್ಟು ಬೇಗ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇದರ ಭಾಗವಾಗಿ ಪೈಪ್ ಲೈನ್ ಮಾರ್ಗ, ತಾಂತ್ರಿಕ ಅಂಶಗಳು ಹಾಗೂ ಇತರೆ ವಿವರಗಳನ್ನು ಪರಿಶೀಲಿಸಲು ಸರ್ವೆ ಕಾರ್ಯ ಆರಂಭಿಸಲಾಗಿದೆ. ಸರ್ವೆ ಕಾರ್ಯ ಪೂರ್ಣಗೊಂಡ ನಂತರ ಅಗತ್ಯ ಪ್ರಕ್ರಿಯೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ ಕಾಮಗಾರಿಯನ್ನು ಶೀಘ್ರದಲ್ಲೇ ಆರಂಭಿಸುವ ಗುರಿ ಹೊಂದಲಾಗಿದೆ. ಇದರ ಭಾಗವಾಗಿ ಸರ್ವೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ಆದಷ್ಟು ಬೇಗ ಕಾಮಗಾರಿ ಆರಂಭಿಸಿ ತಾಲೂಕಿನ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ವ್ಯವಸ್ಥೆಗೆ ಶಾಶ್ವತ ಪರಿಹಾರ ಕಲ್ಪಿಸುವುದು ನನ್ನ ಗುರಿಯಾಗಿದೆ. ರೈತರ ಹಿತಾಸಕ್ತಿ ಹಾಗೂ ಜನರ ನೀರಿನ ಸಮಸ್ಯೆ ಪರಿಹಾರಕ್ಕೆ ಅಗತ್ಯವಿರುವ ಎಲ್ಲಕ್ರಮಗಳನ್ನು ಕೈಗೊಳ್ಳಲಾಗುವುದು’’ ಎಂದು ಶಾಸಕರು ಪತ್ರಿಕಾ ಹೇಳಿಕೆಯಲ್ಲಿತಿಳಿಸಿದ್ದಾರೆ.

ಸಿಎಚ್ ಎನ್ 24ಜಿಪಿಟಿ1

ಗುಂಡ್ಲುಪೇಟೆ ತಾಲೂಕಿನ ಕೆರೆ-ಕಟ್ಟೆಗಳಿಗೆ ಪೈಪ್ ಲೈನ್ ಮೂಲಕ ನೀರು ತುಂಬಿಸುವ ಕಾಮಗಾರಿ ಭಾಗವಾಗಿ ಸರ್ವೆ ಕಾರ್ಯಕ್ಕೆ ಚಾಲನೆ ದೊರೆತಿದೆ.