ಹಲ್ಲೆಪ್ರಕರಣ: ಮೂವರ ಬಂಧನ

Contributed by: yadavvkbantwal@gmail.com|Vijaya Karnataka•
person attacked with sword and iron rod in bantwal three arrested
ಬಿ.ಸಿ.ರೋಡ್ : ತೆಂಕಬೆಳ್ಳೂರು ಗ್ರಾಮದ ಕಮ್ಮಾಜೆಯಲ್ಲಿವ್ಯಕ್ತಿಯೊಬ್ಬರ ಮೇಲೆ ತಲವಾರು ಹಾಗೂ ಕಬ್ಬಿಣದ ರಾಡ್ ನಿಂದ ಹಲ್ಲೆನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ಸೆ.20ರಂದು ಸಂಜೆ ಕಮ್ಮಾಜೆಯಲ್ಲಿಪ್ರಶಾಂತ್ ಬೆಳ್ಚಾಡ್ (41) ಎಂಬವರ ಮೇಲೆ ಅಮ್ಮುಂಜೆ ನಿವಾಸಿ ಪ್ರಶಾಂತ್ (38), ತೆಂಕಬೆಳ್ಳೂರು ನಿವಾಸಿ ರಾಮದಾಸ್ (43) ಹಾಗೂ ಬಡಗಬೆಳ್ಳೂರು ನಿವಾಸಿ ಶಂಕರ (45) ಹಲ್ಲೆನಡೆಸಿದ್ದರು ಎಂದು ಆರೋಪಿಸಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು. ಹಲ್ಲೆಯ ಪರಿಣಾಮ ಪ್ರಶಾಂತ್ ಅವರಿಗೆ ಗಂಭೀರ ಗಾಯವಾಗಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿಗಳಾದ ಪ್ರಶಾಂತ್ , ರಾಮದಾಸ್ ಹಾಗೂ ಶಂಕರ ಅವರನ್ನು ಶುಕ್ರವಾರ ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗಳನ್ನು ಹೆಚ್ಚಿನ ವಿಚಾರಣೆಗಾಗಿ ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

...

25ವೈಎ ಪ್ರಶಾಂತ್ ಅಮ್ಮುಂಜೆ, 25ವೈಎ ರಾಮದಾಸ ತೆಂಕಬೆಳ್ಳೂರು, 25ವೈಎ ಶಂಕರ