ಹ್ಯಾಂಡ್ ಬಾಲ್ ಕ್ರೀಡೆಯಲ್ಲಿನಗರದ ಸರ್ ಎಂ. ವಿಶ್ವೇಶ್ವರಯ್ಯ ಆಂಗ್ಲಮಾಧ್ಯಮ ಶಾಲೆ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದು, ಮೂವರು ವಿದ್ಯಾರ್ಥಿಗಳು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಬಾಗಲಕೋಟೆಯಲ್ಲಿನಡೆದ ಬೆಳಗಾವಿ ವಿಭಾಗ ಮಟ್ಟದ ಹ್ಯಾಂಡ್ ಬಾಲ್ ಕ್ರೀಡಾಕೂಟದಲ್ಲಿ14 ಹಾಗೂ 17 ವರ್ಷದೊಳಗಿನ ಬಾಲಕರ ವಿಭಾಗದಲ್ಲಿಹಾವೇರಿ ಜಿಲ್ಲೆಪ್ರತಿನಿಧಿಸಿ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.
14 ವರ್ಷದೊಳಗಿನ ಬಾಲಕರ ವಿಭಾಗದ ಫೈನಲ್ ಪಂದ್ಯದಲ್ಲಿಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ತಂಡದ ವಿರುದ್ಧ ರೋಚಕ ಸೆಣಸಾಟ ನಡೆಸಿದ ಹಾವೇರಿ ತಂಡ 12-6 ಗೋಲುಗಳ ಅಂತರದಿಂದ ಗೆಲುವು ಸಾಧಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಯಿತು. 17 ವರ್ಷದೊಳಗಿನ ಬಾಲಕರ ವಿಭಾಗದಲ್ಲಿಯೂ ಹಾವೇರಿ ತಂಡ ಉತ್ತಮ ಪ್ರದರ್ಶನ ನೀಡಿ, ಫೈನಲ್ ನಲ್ಲಿಬಾಗಲಕೋಟೆ ಜಿಲ್ಲೆಯ ತಂಡವನ್ನು 28-20 ಗೋಲುಗಳ ಅಂತರದಿಂದ ಮಣಿಸಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಅರ್ಹತೆ ಪಡೆಯಿತು.
ದಾವಣಗೆರೆಯಲ್ಲಿನಡೆದ ರಾಜ್ಯಮಟ್ಟದ 14 ವರ್ಷದೊಳಗಿನ ಬಾಲಕರ ಹ್ಯಾಂಡ್ ಬಾಲ್ ಕ್ರೀಡಾಕೂಟದಲ್ಲಿಬೆಳಗಾವಿ ವಿಭಾಗ ಪ್ರತಿನಿಧಿಸಿದ ಸರ್ ಎಂ. ವಿಶ್ವೇಶ್ವರಯ್ಯ ಶಾಲೆ ತಂಡ ಲೀಗ್ ಹಂತದ ಎಲ್ಲಪಂದ್ಯ ಗೆದ್ದು, ಸೆಮಿಫೈನಲ್ ನಲ್ಲೂಜಯಗಳಿಸಿ ಫೈನಲ್ ಪ್ರವೇಶಿಸಿತು. ಬೆಂಗಳೂರು ಹಾಗೂ ಬೆಳಗಾವಿ ವಿಭಾಗಗಳ ನಡುವೆ ನಡೆದ ರೋಚಕ ಫೈನಲ್ ಪಂದ್ಯದಲ್ಲಿಬೆಳಗಾವಿ ವಿಭಾಗದ ತಂಡ ರನ್ನರ್ ಅಪ್ ಸ್ಥಾನ ಗಳಿಸಿತು.
ರಾಷ್ಟ್ರಮಟ್ಟಕ್ಕೆ ಮೂವರು: ತಂಡದ ಮೊಹಮ್ಮದ್ ಸೈಫುದ್ದೀನ್ ಕಮಲಾಪುರ, ಕಲ್ಪಿತ್ ದಿವಾಟೆ,ಚಂದನ್ ಜೋಗುರ್ ಅವರು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳು ಹಾಗೂ ದೈಹಿಕ ಶಿಕ್ಷಕ ಕೆಂಚಪ್ಪ ಲಿಂಗನಹಳ್ಳಿ ಅವರನ್ನು ಶಾಲೆ ಅಧ್ಯಕ್ಷ ಕೊಟ್ರೇಶಪ್ಪ ಬಸೇಗಣ್ಣಿ, ಉಪಾಧ್ಯಕ್ಷ ಶಾಂತಪ್ಪ ಇಟಗಿ, ಕಾರ್ಯದರ್ಶಿ ಆರ್ . ಪ್ರತಾಪ್ , ಆಡಳಿತ ಮಂಡಳಿ ಸದಸ್ಯರು ಹಾಗೂ ಪ್ರಾಂಶುಪಾಲ ಪದ್ಮರಾಜ್ ಸಣ್ಣಕ್ಕಿ ಸನ್ಮಾನಿಸಿ ಗೌರವಿಸಿದರು.
ಪೋಟೋ 24 ಮಂಜು 9::::::
ಹ್ಯಾಂಡ್ ಬಾಲ್ ಕ್ರೀಡೆಯಲ್ಲಿರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾದ ಹಾವೇರಿಯ ಸರ್ ಎಂ. ವಿಶ್ವೇಶ್ವರಯ್ಯ ಆಂಗ್ಲಮಾಧ್ಯಮ ಶಾಲೆ ತಂಡ.