ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Contributed by: abid82040@gmail.com|Vijaya Karnataka•
woman commits suicide by hanging in madhugiri
ಮಧುಗಿರಿ: ಮಹಿಳೆಯೊಬ್ಬರು ತಮ್ಮ ಮನೆಯಲ್ಲಿಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಪಟ್ಟಣದ ರಾಘವೇಂದ್ರ ಬಡಾವಣೆಯ ವಾಸಿ ರಾಧಮ್ಮ (30) ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದ್ದು, ಇವರು ಕಸಬಾ ವ್ಯಾಪ್ತಿಯ ಚಿನಕವಜ್ರ ಗ್ರಾಮದವರಾಗಿದ್ದಾರೆ. ಕೂಲಿ ಕೆಲಸ ಮಾಡಿಕೊಂಡು ಬಾಡಿಗೆ ಮನೆಯಲ್ಲಿಒಂಟಿಯಾಗಿ ವಾಸವಿದ್ದರು. ಈ ಹಿಂದೆಯೇ ಪತಿ ಕೂಡ ಅನಾರೋಗ್ಯಕ್ಕೆ ತುತ್ತಾಗಿ ಮೃತಪಟ್ಟಿದ್ದು, ಇವರಿಗೆ 5 ವರ್ಷದ ಗಂಡು ಮಗುವಿದ್ದು, ಅಜ್ಜಿ, ತಾತ ಆರೈಕೆ ಮಾಡುತ್ತಿದ್ದಾರೆ. ಮಹಿಳೆಯ ಸಾವಿಗೆ ಕಾರಣ ತಿಳಿದು ಬಂದಿಲ್ಲ. ಮಧುಗಿರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.