ರಡ್ಡಿ ಸಮಾಜದ ಸಂಘಟನೆಗೆ ಶ್ರಮಿಸಿ

Contributed by: VIJAYKUMAR P|Vijaya Karnataka•
crucial development for raddi communitys education and organization
ಜಿ.ಎಸ್ .ಪಾಟೀಲ, ರಾಯರಡ್ಡಿ ಅವರಿಗೆ ಅಭಿನಂದನೆ

ರಡ್ಡಿ ಸಮಾಜದ ಸಂಘಟನೆಗೆ ಶ್ರಮಿಸಿ
-ಪ್ರತಿ ತಾಲೂಕಿನಲ್ಲಿಶಿಕ್ಷಣ ಸಂಸ್ಥೆ ಸ್ಥಾಪಿಸಿ

ವಿಕ ಸುದ್ದಿಲೋಕ ಹುಬ್ಬಳ್ಳಿ

‘ರಡ್ಡಿ ಸಮಾಜದ ಸಂಘಟನೆ, ಶಿಕ್ಷಣ ಹಾಗೂ ಆರ್ಥಿಕ ಅಭಿವೃದ್ಧಿಗೆ ಆದ್ಯತೆ ನೀಡುವ ಮೂಲಕ ಗ್ರಾಮೀಣ ಭಾಗದ ಬಡವರು, ಮಹಿಳೆಯರು ಹಾಗೂ ಯುವಕರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು.’ ಇದು ರಡ್ಡಿ ಸಮಾಜದ ಗಣ್ಯರ ಮನವಿ.

ಸತ್ತೂರಿನ ಶ್ರೀ ವೀರೇಂದ್ರ ಹೆಗ್ಗಡೆ ಕಲಾಕ್ಷೇತ್ರದಲ್ಲಿಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ವೀರಶೈವ ಲಿಂಗಾಯತ ರಡ್ಡಿ ಸಮಾಜದ ಸಹಯೋಗದಲ್ಲಿವಿಧಾನಸಭೆ ಸಭಾಧ್ಯಕ್ಷ ಜಿ.ಎಸ್ .ಪಾಟೀಲ ಹಾಗೂ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಅವರಿಗೆ ಭಾನುವಾರ ರಾಜ್ಯ ಮಟ್ಟದ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ, ಸಮಾಜದ ಸಂಸ್ಕೃತಿ, ಆಚಾರ-ವಿಚಾರ ಹಾಗೂ ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ವೇದಿಕೆಯಾಗಿ ಸಮಾವೇಶಗಳು ರೂಪುಗೊಳ್ಳಬೇಕು. ರಡ್ಡಿ ಸಮಾಜವು ಶೈವ, ವೀರಶೈವ ಹಾಗೂ ಲಿಂಗಾಯತ ಸಂಸ್ಕೃತಿಗಳೊಂದಿಗೆ ತನ್ನದೇ ಆದ ಸಾಂಸ್ಕೃತಿಕ ಪರಂಪರೆ ಹೊಂದಿದೆ. ವೇಮನರು ಹಾಗೂ ಹೇಮರೆಡ್ಡಿ ಮಲ್ಲಮ್ಮ ಅವರ ಸಾಮಾಜಿಕ ಕಳಕಳಿ, ಏಕತೆ ಮತ್ತು ಜನಪರ ಕಾರ್ಯಗಳನ್ನು ಸ್ಮರಿಸಬೇಕು. ಯುವಕರು ಕಷ್ಟಪಟ್ಟು ಅಧ್ಯಯನ ಮಾಡಿ ಉನ್ನತ ಶಿಕ್ಷಣ ಪಡೆದು ಉತ್ತಮ ಉದ್ಯೋಗ ಗಳಿಸಬೇಕು ಎಂದು ಸಲಹೆ ನೀಡಿದರು.

ಮುಂದಿನ ಸಮಾವೇಶ ಕಲಬುರಗಿಯಲ್ಲಿ

ವಿಧಾನಸಭೆ ಸಭಾಧ್ಯಕ್ಷ ಜಿ.ಎಸ್ .ಪಾಟೀಲ ಮಾತನಾಡಿ, ಸಮಾಜದ ಮಹನೀಯರು ತೋರಿದ ಮಾರ್ಗದಲ್ಲಿಯುವಕರು ಮುನ್ನಡೆಯುವಂತೆ ಪಾಲಕರು ಪ್ರೇರೇಪಿಸಬೇಕು. ಸಮಾಜದ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗಾಗಿ ರಾಜ್ಯದ ಎಲ್ಲತಾಲೂಕುಗಳಲ್ಲೂಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಬೇಕು. ಮುಂದಿನ ದಿನಗಳಲ್ಲಿರಡ್ಡಿ ಸಮಾಜದ ಸಮಾವೇಶವನ್ನು ಕಲಬುರಗಿ ಜಿಲ್ಲೆಯಲ್ಲಿಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ಶಾಸಕ ಶರಣಗೌಡ ಕಂದಕೂರ ಮಾತನಾಡಿ, ಸಮಾಜದ ಬಡವರು ಹಾಗೂ ಸಂಕಷ್ಟದಲ್ಲಿರುವವರಿಗೆ ನೆರವು ನೀಡುವ ಮೂಲಕ ಅವರ ಬದುಕು ಉತ್ತಮಗೊಳಿಸಬೇಕು. ರಾಜಕೀಯವಾಗಿ ಬೇರೆ ಬೇರೆ ಪಕ್ಷಗಳಲ್ಲಿದ್ದರೂ ಸಮಾಜದ ಸಂಘಟನೆ ಮತ್ತು ಅಭಿವೃದ್ಧಿಯ ವಿಚಾರದಲ್ಲಿಪಕ್ಷಾತೀತವಾಗಿ ಒಂದಾಗಿ ನಿಲ್ಲಬೇಕು ಎಂದರು.

ಗ್ರಾಮೀಣ ಪ್ರದೇಶದ ಬಡ ಮಕ್ಕಳ ಶಿಕ್ಷಣಕ್ಕೆ ನೆರವು ನೀಡಬೇಕು. ಸಮಾಜದ ಆರ್ಥಿಕವಾಗಿ ಹಿಂದುಳಿದ ಮಹಿಳೆಯರು ಹಾಗೂ ಯುವಕರ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು ಎಂದರು.

ಎಸ್ .ಆರ್ .ಪಾಟೀಲ ಮಾತನಾಡಿ, ಸಮಾಜದ ಸಮಗ್ರ ಅಭಿವೃದ್ಧಿಗಾಗಿ ಬೃಹತ್ ಬ್ಯಾಂಕಿಂಗ್ ಸಂಸ್ಥೆ ಹಾಗೂ ಶಿಕ್ಷಣ ಸಂಸ್ಥೆ ಸ್ಥಾಪಿಸುವ ಅಗತ್ಯವಿದೆ. ಇದಕ್ಕೆ ಅಗತ್ಯ ಸಹಕಾರ ನೀಡಲು ಸಿದ್ಧವಿರುವುದಾಗಿ ಹೇಳಿದರು.

ವಿಧಾನ ಪರಿಷತ್ ಸದಸ್ಯ ಶರಣಗೌಡ ಪಾಟೀಲ ಬಯ್ಯಾಪುರ, ಯುವಕರು ದುಡಿಮೆ ಹಾಗೂ ಶಿಕ್ಷಣಕ್ಕೆ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.

ಸಾನ್ನಿಧ್ಯ ವಹಿಸಿದ್ದ ಶಿರಹಟ್ಟಿ ಶ್ರೀ ಫಕೀರ ದಿಂಗಾಲೇಶ್ವರ ಸ್ವಾಮೀಜಿ, ಬಡ ಮಕ್ಕಳ ಶಿಕ್ಷಣಕ್ಕೆ ಸಮಾಜದ ಶ್ರೀಮಂತ ಕುಟುಂಬಗಳು ನೆರವು ನೀಡುವ ವ್ಯವಸ್ಥೆ ರೂಪಿಸಬೇಕು ಎಂದರು. ಸಮಾರಂಭದಲ್ಲಿಹೇಮರೆಡ್ಡಿ ಮಲ್ಲಮ್ಮ ಸೌಹಾರ್ದ ಸಹಕಾರಿ ಬ್ಯಾಂಕ್ ನ ಲೋಗೋ ಬಿಡುಗಡೆ ಮಾಡಲಾಯಿತು.

ಅಧ್ಯಕ್ಷತೆ ವಹಿಸಿದ್ದ ರಾಜ್ಯ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ವೀರಶೈವ ಲಿಂಗಾಯತ ರಡ್ಡಿ ಸಮಾಜದ ರಾಜ್ಯಾಧ್ಯಕ್ಷ ಶೇಖರಗೌಡ ಮಾಲಿಪಾಟೀಲ ಮಾತನಾಡಿ, ಸಮಾಜದ ಯುವಕರಿಗೆ ಅನುಕೂಲವಾಗುವಂತೆ ಈ ಭಾಗದಲ್ಲಿಶಿಕ್ಷಣ ಸಂಸ್ಥೆ ಆರಂಭಿಸಲು ಸಂಘ ಸಿದ್ಧವಾಗಿದೆ ಎಂದ ಅವರು, ನಿಯೋಜಿತ ಹೇಮರೆಡ್ಡಿ ಮಲ್ಲಮ್ಮ ಸೌಹಾರ್ದ ಸಹಕಾರಿ ಬ್ಯಾಂಕ್ ನ ಲೋಗೋ ಬಿಡುಗಡೆ ಮಾಡಿದರು.

ಮಾಜಿ ಶಾಸಕ ಜಿ.ವೀರಪ್ಪ ಕೆಸರಟ್ಟಿ, ಸೋಮನಗೌಡ ಪಾಟೀಲ ಸಾಸನೂರ, ಐ.ಎಸ್ .ಪಾಟೀಲ ಸೇರಿದಂತೆ ವಿವಿಧ ಜಿಲ್ಲೆಗಳ ಜಿಲ್ಲಾ ಹಾಗೂ ತಾಲೂಕು ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

ಫೋಟೊ: 27ಸಂತೋಷ: ರಡ್ಡಿ ಸಮಾಜ

ಧಾರವಾಡದಲ್ಲಿಭಾನುವಾರ ನಡೆದ ವಿಧಾನಸಭೆ ಸಭಾಧ್ಯಕ್ಷ ಜಿ.ಎಸ್ .ಪಾಟೀಲ ಹಾಗೂ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಅವರಿಗೆ ರಾಜ್ಯ ಮಟ್ಟದ ಅಭಿನಂದನಾ ಸಮಾರಂಭಕ್ಕೆ ಗಣ್ಯರು ಚಾಲನೆ ನೀಡಿದರು.

ಫೋಟೊ: 27ಸಂತೋಷ: ರಡ್ಡಿ ಸಮಾಜ

ಸಮಾರಂಭದಲ್ಲಿಜಿ.ಎಸ್ . ಪಾಟೀಲ ಹಾಗೂ ಬಸವರಾಜ ರಾಯರಡ್ಡಿ ಅವರನ್ನು ಸನ್ಮಾನಿಸಲಾಯಿತು.