ಹಾವೇರಿ: ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿ ಚುನಾವಣಾ ಪ್ರಕ್ರಿಯೆ ಆರಂಭಗೊಂಡಿದ್ದು, ಜಿಲ್ಲೆಯಲ್ಲಿಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. ಈ ಹಿನ್ನೆಲೆಯಲ್ಲಿರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳು ನಡೆಸುವ ಸಭೆ, ಸಮಾರಂಭ, ಮೆರವಣಿಗೆ ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗೆ ಪೂರ್ವಾನುಮತಿ ನೀಡುವ ಸಲುವಾಗಿ ಹಾವೇರಿ ಜಿಲ್ಲೆಯಲ್ಲಿಏಕಗವಾಕ್ಷಿ ಸಮಿತಿ ರಚಿಸಿ ಜಿಲ್ಲಾಧಿಕಾರಿ ಡಾ. ವಿಜಯ ಮಹಾಂತೇಶ್ ದಾನಮ್ಮನವರ ಆದೇಶ ಹೊರಡಿಸಿದ್ದಾರೆ.ಚುನಾವಣಾ ಮಾದರಿ ನೀತಿ ಸಂಹಿತೆಗೆ ಯಾವುದೇ ರೀತಿಯಲ್ಲಿಧಕ್ಕೆ ಉಂಟಾಗದಂತೆ ಕಾರ್ಯಕ್ರಮಗಳಿಗೆ ಅನುಮತಿ ನೀಡುವುದು ಹಾಗೂ ಸಂಬಂಧಿತ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸುವ ಉದ್ದೇಶದಿಂದ ಸಮಿತಿ ಕಾರ್ಯನಿರ್ವಹಿಸಲಿದೆ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾಚುನಾವಣಾಧಿಕಾರಿಗಳು ಸಮಿತಿಯ ಅಧ್ಯಕ್ಷರಾಗಿದ್ದು, ಅಪರ ಜಿಲ್ಲಾಧಿಕಾರಿ, ಪ್ರಾದೇಶಿಕ ಸಾರಿಗೆ ಅಧಿಕಾರಿ, ಪೊಲೀಸ್ ಇಲಾಖೆಯ ಪ್ರತಿನಿಧಿ ಹಾಗೂ ಉಪವಿಭಾಗಾಧಿಕಾರಿಗಳನ್ನು ಸಮಿತಿಯ ಸದಸ್ಯರು ಹಾಗೂ ಸದಸ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಚುನಾವಣಾ ಅವಧಿಯಲ್ಲಿರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿಗಳು ಸಭೆ, ಮೆರವಣಿಗೆ, ಪ್ರಚಾರ ಕಾರ್ಯಕ್ರಮ ಸೇರಿದಂತೆ ಯಾವುದೇ ಸಾರ್ವಜನಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಮೊದಲು ನಿಗದಿತ ಪ್ರಕ್ರಿಯೆಯಂತೆ ಏಕಗವಾಕ್ಷಿ ಸಮಿತಿಯಿಂದ ಪೂರ್ವಾನುಮತಿ ಪಡೆದುಕೊಳ್ಳಬೇಕು ಎಂದು ಜಿಲ್ಲಾಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿತಿಳಿಸಿದ್ದಾರೆ.
=
ಸ್ವೀಪ್ ಸಮಿತಿ ರಚನೆ
ಹಾವೇರಿ: ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿ ಜಿಲ್ಲೆಯಲ್ಲಿಮತದಾರರಲ್ಲಿಚುನಾವಣಾ ಜಾಗೃತಿ ಮೂಡಿಸುವ ಉದ್ದೇಶದಿಂದ ಸ್ವೀಪ್ ಸಮಿತಿಯನ್ನು ರಚಿಸಿ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ್ ದಾನಮ್ಮನವರ ಆದೇಶ ಹೊರಡಿಸಿದ್ದಾರೆ. ಅರ್ಹ ಮತದಾರರು ಮತದಾನ ಮಾಡುವಂತೆ ಪ್ರೇರೇಪಿಸುವುದು, ಮತದಾನದ ಮಹತ್ವ ಕುರಿತು ಅರಿವು ಮೂಡಿಸುವುದು ಹಾಗೂ ಮತದಾರರ ಪಾಲ್ಗೊಳ್ಳುವಿಕೆಯನ್ನು ಹೆಚ್ಚಿಸವುದು ಸ್ವೀಪ್ ಸಮಿತಿಯ ಉದ್ದೇಶವಾಗಿದೆ. ಜಿಲ್ಲಾಪಂಚಾಯತಿ ಸಿಇಒ ಅಧಿಕಾರಿಗಳನ್ನು ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದ್ದು, ಉಪ ವಿಭಾಗಾಧಿಕಾರಿಗಳು, ಜಿಲ್ಲಾಶಿಕ್ಷಣಾಧಿಕಾರಿ, ಜಿಲ್ಲಾನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು ಹಾಗೂ ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನು ಸಮಿತಿಯ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ಜಿಲ್ಲಾವಾರ್ತಾಧಿಕಾರಿಗಳು ಸಮಿತಿಯ ಸದಸ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿತಿಳಿಸಿದ್ದಾರೆ.