ದೇಣಿಗೆ ಸಂಗ್ರಹ ಅಭಿಯಾನ

Contributed by: rajeshinamadar7@gmail.com|Vijaya Karnataka•
fundraising campaign for farmers debt relief launched
ದೇಣಿಗೆ ಸಂಗ್ರಹ ಅಭಿಯಾನ

ತಾಳಿಕೋಟೆ: ರೈತರಿಗೆ ಪರಿಹಾರ ನೀಡಲು ಹಣವಿಲ್ಲದ ಸ್ಥಿತಿಗೆ ರಾಜ್ಯ ಸರಕಾರ ತಲುಪಿದೆ ಎಂದು ಅಖಂಡ ಕರ್ನಾಟಕ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಆರೋಪಿಸಿದ್ದಾರೆ.
ಕೃಷಿಗಾಗಿ ಸಾಲ ಮಾಡಿಕೊಂಡು ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಕನಿಷ್ಠ ಪ್ರತಿ ಎಕರೆಗೆ 25 ಸಾವಿರ ರೂ. ಪರಿಹಾರ ನೀಡಬೇಕಿತ್ತು. ಆದರೆ ಸರಕಾರ ಕೇವಲ 2,500 ರೂ. ನೀಡಲು ಮುಂದಾಗಿದೆ. ಆದ್ದರಿಂದ ರೈತರಿಂದಲೇ ಹಣ ಸಂಗ್ರಹಿಸಿ ಸರಕಾರಕ್ಕೆ ನೀಡೋಣ ಎಂಬ ವ್ಯಂಗ್ಯಾತ್ಮಕ ನಿಲುವಿನೊಂದಿಗೆ ಅಖಂಡ ಕರ್ನಾಟಕ ರೈತ ಸಂಘ ದೇಣಿಗೆ ಸಂಗ್ರಹ ಅಭಿಯಾನಕ್ಕೆ ಮುಂದಾಗಿದೆ ಎಂದು ತಿಳಿಸಿದ್ದಾರೆ.

ಸೆ.29 ರಿಂದ ತಾಳಿಕೋಟೆಯಲ್ಲಿಮೊದಲ ಹಂತದ ದೇಣಿಗೆ ಸಂಗ್ರಹ ನಡೆಯಲಿದ್ದು, ನಂತರ ಬಸವನಬಾಗೇವಾಡಿ ಸೇರಿದಂತೆ ಜಿಲ್ಲೆಯ ಇತರೆ ತಾಲೂಕುಗಳಲ್ಲಿಯೂ ರೈತರಿಂದ ಹಣ ಸಂಗ್ರಹಿಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರಕಾರಕ್ಕೆ ರವಾನಿಸಲಾಗುವುದು ಎಂದು ತಿಳಿಸಿದ್ದಾರೆ.

ಖಾಸ್ಗತೇಶ್ವರ ಮಠದಲ್ಲಿಮಂಗಳವಾರ ಬೆಳಗ್ಗೆ 10.30ಕ್ಕೆ ಪೂಜೆ ಸಲ್ಲಿಸುವ ಮೂಲಕ ದೇಣಿಗೆ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಲಾಗುವುದು. ಈ ಹಿನ್ನೆಲೆಯಲ್ಲಿಸಂಘದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿಪಾಲ್ಗೊಳ್ಳಬೇಕು ಎಂದು ಅರವಿಂದ ಕುಲಕರ್ಣಿ, ತಾಲೂಕು ಅಧ್ಯಕ್ಷ ಬಾಳಪ್ಪಗೌಡ ಲಿಂಗದಳ್ಳಿ ಹಾಗೂ ಉಪಾಧ್ಯಕ್ಷ ರಾಮನಗೌಡ ಹಾದಿಮನಿ ಮನವಿ ಮಾಡಿದ್ದಾರೆ.