ರಾಜ್ಯ ಸರಕಾರ ಕ್ರೀಡೆಗಳಿಗೆ ವಿಶೇಷ ಪ್ರೋತ್ಸಾಹ ನೀಡುತ್ತಿದ್ದು, ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿಮಂಗಳಾ ಕ್ರೀಡಾಂಗಣಕ್ಕೆ 20 ಕೋಟಿ ಘೋಷಣೆ ಮಾಡಲಾಗಿದೆ. ಗ್ರಾಮ ಮಟ್ಟದಲ್ಲೂ ಕ್ರೀಡೆಗೆ ವಿಶೇಷ ಪ್ರೋತ್ಸಾಹ ಸಿಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಹೇಳಿದರು.ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಮಹಾನಗರ ಪಾಲಿಕೆ, ಮೈ ಭಾರತ್ ದಕ್ಷಿಣ ಕನ್ನಡ, ಜಿಲ್ಲಾಯುವಜನ ಒಕ್ಕೂಟ ಹಾಗೂ ನಾನಾ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿಮಂಗಳಾ ಕ್ರೀಡಾಂಗಣದಲ್ಲಿಭಾನುವಾರ ನಡೆದ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟದಲ್ಲಿಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.
ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಅಧ್ಯಕ್ಷೆ ಶಾಲೆಟ್ ಪಿಂಟೊ ಉದ್ಘಾಟಿಸಿದರು. ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷೆ ಜೋಕಂ ಸ್ಟ್ಯಾನ್ಲಿಅಲ್ವಾರಿಸ್ , ದ.ಕ. ಜಿಲ್ಲಾಕರಾಟೆ ಅಸೋಸಿಯೇಶನ್ ಅಧ್ಯಕ್ಷ ಈಶ್ವರ್ ಕಟೀಲು, ದ.ಕ. ಫುಟ್ಬಾಲ್ ಅಸೋಸಿಯೇಶನ್ ಅಧ್ಯಕ್ಷ ಅಸ್ಲಾಂ, ಯುವಜನ ಒಕ್ಕೂಟದ ಅಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು, ಯುವಭಾರತ್ ಜಿಲ್ಲಾಉಪನಿರ್ದೇಶಕ ಉಲ್ಲಾಸ್ , ಉಡುಪಿ ಕರಾಟೆ ಅಸೋಸಿಯೇಶನ್ ಅಧ್ಯಕ್ಷ ಕೀರ್ತಿ, ಅಂತಾರಾಷ್ಟ್ರೀಯ ವೈಟ್ ಲಿಫ್ಟರ್ ಗಳಾದ ಪುಷ್ಪರಾಜ್ ಹೆಗ್ಡೆ, ಅರ್ತಾ ಡಿಸೋಜ, ದ.ಕ. ಕರಾಟೆ ಅಸೋಸಿಯೇಶನ್ ಕಾರ್ಯದರ್ಶಿ ಸಾಜಿ, ಕೋಸ್ಟಲ್ ಕರ್ನಾಟಕ ಅಸೋಸಿಯೇಶನ್ ಅಧ್ಯಕ್ಷ ಯಶವಂತಗೌಡ, ಸೈಕ್ಲಿಂಗ್ ಮಂಗಳೂರು ಅಧ್ಯಕ್ಷ ಮಹೇಶ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ದ.ಕ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಪ್ರದೀಪ್ ಡಿಸೋಜ ಸ್ವಾಗತಿಸಿದರು. ದಸರಾ ಕ್ರೀಡಾಕೂಟದ ನೋಡಲ್ ಅಧಿಕಾರಿ ವಿನೋದ್ ಕುಮಾರ್ ನಿರೂಪಿಸಿದರು.
27ಎಂಎನ್ ಜಿ-ದಸರಾ ಕ್ರೀಡಾಕೂಟ
ಮಂಗಳೂರಿನಲ್ಲಿ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ ಭಾನುವಾರ ನಡೆಯಿತು.