18 year old Student Commits Suicide Incident In Devanahalli
ಹಾಸ್ಟೆಲ್ ಕೊಠಡಿಯಲ್ಲಿಡಿಪ್ಲೊಮಾ ವಿದ್ಯಾರ್ಥಿ ನೇಣಿಗೆ ಶರಣು
Contributed by: Manjunath GK|Vijaya Karnataka•
ವಿಕ ಸುದ್ದಿಲೋಕ ಬೆಂಗಳೂರು ಗ್ರಾಮಾಂತರ
ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಗ್ರಾಮದಲ್ಲಿರುವ ಸರಕಾರಿ ಉಪಕರಣಾಗಾರ ಹಾಗೂ ತರಬೇತಿ ಕೇಂದ್ರದ ಹಾಸ್ಟೆಲ್ ಕೊಠಡಿಯಲ್ಲಿಡಿಪ್ಲೊಮಾ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಶರಣಾಗಿದ್ದಾರೆ.ಬೆಂಗಳೂರಿನ ವಿಜಯನಗರ ನಿವಾಸಿ ಜೋಹೆಲ್ (18) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಹಾಸ್ಟೆಲ್ ನ ಕೊಠಡಿಯಲ್ಲಿದ್ದ ಫ್ಯಾನಿಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿಪತ್ತೆಯಾಗಿದ್ದಾರೆ. ಚನ್ನರಾಯಪಟ್ಟಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದರು. ಮರಣೋತ್ತರ ಪರೀಕ್ಷೆಗಾಗಿ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ವಿದ್ಯಾರ್ಥಿಯ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಚನ್ನರಾಯಪಟ್ಟಣ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.