ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಚೌಳಹಿರಿಯೂರು ಗ್ರಾಮದಲ್ಲಿ1888ರಲ್ಲಿಮೈಸೂರು ಮಹಾರಾಜರು ನಿರ್ಮಿಸಿರುವ 102 ಎಕರೆ ವಿಸ್ತೀರ್ಣದ ಕೆರೆಯ ಜಲಾಯನ ಪ್ರದೇಶದಲ್ಲಿಗ್ರಾಮ ಪಂಚಾಯಿತಿ ಅಕ್ರಮವಾಗಿ ನಿವೇಶನಗಳನ್ನು ರಚಿಸಿ ಸ್ಥಳೀಯರಿಗೆ ಮಂಜೂರು ಮಾಡಿ ಮತ್ತು ಖಾತೆ ನೀಡಿರುವ ಪ್ರಕರಣ ಸಂಬಂಧ ಹೈಕೋರ್ಟ್ , ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ. ಚೌಳ ಹಿರಿಯೂರು ಕೆರೆ ಜಲಾಯನ ಪ್ರದೇಶದಲ್ಲಿನ ಒತ್ತುವರಿ ತೆರವುಗೊಳಿಸಲು ಸರಕಾರಕ್ಕೆ ನಿರ್ದೇಶಿಸುವಂತೆ ಕೋರಿ ಜಗದೀಶ್ ಸೇರಿ ಐವರು ಗ್ರಾಮಸ್ಥರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ನ್ಯಾಯಮೂರ್ತಿಗಳಾದ ಅನು ಸಿವರಾಮನ್ ಮತ್ತು ಕೆ.ಎಸ್ . ಭರತ್ ಕುಮಾರ್ ಅವರಿದ್ದ ವಿಭಾಗಿಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಕೆಲ ಕಾಲ ಅರ್ಜಿದಾರರ ವಾದ ಆಲಿಸಿದ ಪೀಠವು ಪ್ರತಿವಾದಿಗಳಾದ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ, ಕಂದಾಯ ಇಲಾಖೆ, ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆ ಹಾಗೂ ಸಣ್ಣ ನೀರಾವರಿ ಇಲಾಖೆಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಚಿಕ್ಕಮಗಳೂರು ಜಿಲ್ಲಾಧಿಕಾರಿ ಮತ್ತು ಜಿಲ್ಲಾಸಣ್ಣ ನೀರಾವರಿ ಕಾರ್ಯಕಾರಿ ಎಂಜಿನಿಯರ್ ಗೆ ನೋಟಿಸ್ ಜಾರಿಗೊಳಿಸಿತು.