ವಿಕ ಸುದ್ದಿಲೋಕ ಮಂಡ್ಯ ಮಂಡ್ಯ ಜಿಲ್ಲಾಹಾಲು ಒಕ್ಕೂಟ(ಮನ್ ಮುಲ್ )ದಲ್ಲಿಬೆಳಕಿಗೆ ಬಂದಿರುವ ಹಾಲಿನಪುಡಿ ಕಲಬೆರಕೆ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಮಹತ್ವದ ಬೆಳವಣಿಗೆಯಲ್ಲಿಮನ್ ಮುಲ್ ನಿರ್ದೇಶಕ, ಮಾಜಿ ಅಧ್ಯಕ್ಷ ಯು.ಸಿ.ಶಿವಕುಮಾರ್ ಅವರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಹಾಲಿನಪುಡಿ ಕಲಬೆರಕೆ ಪ್ರಕರಣ ಸಂಬಂಧ ಈಗಾಗಲೇ ಐದು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರ ಪೈಕಿ ಒಬ್ಬ ಅಧಿಕಾರಿ ಈ ಪ್ರಕರಣದಲ್ಲಿಮನ್ ಮುಲ್ ನಿರ್ದೇಶಕ ಯು.ಸಿ.ಶಿವಕುಮಾರ್ ಅವರ ಪಾತ್ರವಿರುವ ಬಗ್ಗೆ ವಿಚಾರಣೆ ವಿಚಾರಣೆ ವೇಳೆ ಮಾಹಿತಿ ನೀಡಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿವಿಚಾರಣೆಗೆ ಹಾಜರಾಗುವಂತೆ ಶಿವಕುಮಾರ್ ಅವರಿಗೆ ಪೊಲೀಸರು ನೋಟಿಸ್ ನೀಡಿದ್ದರು. ಆದರೆ, ಶಿವಕುಮಾರ್ ಅವರು ವಿದೇಶಕ್ಕೆ ಪ್ರವಾಸಕ್ಕೆ ತೆರಳಿದ್ದರಿಂದ ಅವರ ಸಹೋದರ ಮತ್ತವರ ಪುತ್ರನನ್ನು ಪೊಲೀಸರು ಠಾಣೆಗೆ ಕರೆತಂದು ಕೂರಿಸಿಕೊಂಡಿದ್ದರು. ಇದರಿಂದ ಒತ್ತಡಕ್ಕೆ ಒಳಗಾದ ಶಿವಕುಮಾರ್ ಅವರು ಸೋಮವಾರ ರಾತ್ರಿ ಮದ್ದೂರು ಠಾಣೆಗೆ ತೆರಳಿ ಪೊಲೀಸ್ ವಿಚಾರಣೆಗೆ ಒಳಗಾಗಿದ್ದಾರೆ ಎಂದು ಪೊಲೀಸ್ ಮೂಲಗಳು ಖಚಿತಪಡಿಸಿವೆ.