ಅಲ್ಲಮಪ್ರಭು ದೇವಸ್ಥಾನದ ಲೋಕಾರ್ಪಣೆ ಇಂದಿನಿಂದ

Contributed bypressbasu78@gmail.com|Vijaya Karnataka
allama prabhu temple festivities inauguration and prana pratishtha ceremony
ವಿಕ ಸುದ್ದಿಲೋಕ ಹುಕ್ಕೇರಿ

ತಾಲೂಕಿನ ಯಾದಗೂಡ ಗ್ರಾಮದಲ್ಲಿನೂತನವಾಗಿ ಜೀರ್ಣೋದ್ಧಾರಗೊಂಡ ಶ್ರೀ ಅಲ್ಲಮಪ್ರಭು ದೇವಸ್ಥಾನದ ಲೋಕಾರ್ಪಣೆ ಮತ್ತು ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಸೆ.5ರಿಂದ 7ರ ವರೆಗೆ ಜರುಗಲಿದೆ.
5ರಂದು ಅಲ್ಲಮಪ್ರಭು ದೇವರ ಮೂರ್ತಿ ಆಗಮನ ಮತ್ತು ಪ್ರವಚನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. 6ರಂದು ಗ್ರಾಮದ ಎಲ್ಲಸುಮಂಗಲಿಯರಿಗೆ ಉಡಿ ತುಂಬುವುದು. 7ರಂದು ಮೂರ್ತಿ ಪ್ರಾಣ ಪ್ರತಿಷ್ಠಾಪನೆ, ಹೋಮ-ಹವನ, ಪೂಜಾ ಕಾರ್ಯಕ್ರಮಗಳು ಜರುಗಲಿವೆ. ಬೆಳಗ್ಗೆ 11ಗಂಟೆಗೆ ದೇವಸ್ಥಾನ ಲೋಕಾರ್ಪಣೆ ಮತ್ತು ಧರ್ಮಸಭಾ ಕಾರ್ಯಕ್ರಮ ಜರುಗಲಿದೆ.

ನಿಡಸೋಸಿ ದುರದುಂಡೀಶ್ವರ ಸಿದ್ಧಸಂಸ್ಥಾನ ಮಠದ ಜಗದ್ಗುರು ಡಾ.ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ.

ಚಿಕ್ಕೋಡಿ ಸಂಪಾದನ ಚರಮೂರ್ತಿ ಮಠದ ಸಂಪಾದನ ಸ್ವಾಮೀಜಿ, ಗುರ್ಲಾಪುರದ ಕಂಪಯ್ಯಸ್ವಾಮಿ ಮಠದ ಡಾ. ಮಲ್ಲಿಕಾರ್ಜುನ ಸ್ವಾಮೀಜಿ, ಚಿಂಚಣಿ ಅಲ್ಲಮಪ್ರಭು ಸಿದ್ಧಸಂಸ್ಥಾನ ಮಠ ಶಿವಪ್ರಸಾದ ದೇವರು, ಕಮತ್ಯಾನಹಟ್ಟಿ ಕುಮಾರೇಶ್ವರ ಹೊಸಮಠದ ವಿರೂಪಾಕ್ಷ ಸ್ವಾಮೀಜಿ ಉಪಸ್ಥಿತರಿರುವರು. ಪ್ರತಿದಿನ ಮಹಾಪ್ರಸಾದ ವ್ಯವಸ್ಥೆ ಮಾಡಲಾಗಿದೆ ಎಂದು ಅಲ್ಲಮಪ್ರಭು ದೇವಸ್ಥಾನ ಜೀರ್ಣೋದ್ಧಾರ ಕಮಿಟಿ ಸದಸ್ಯರು ಪ್ರಕಟಣೆಯಲ್ಲಿತಿಳಿಸಿದ್ದಾರೆ.