ಬಾಗಲಕೋಟೆ : ಜಿಲ್ಲಾಡಳಿತ, ಜಿಲ್ಲಾಪಂಚಾಯಿತಿ, ಉಪನಿರ್ದೇಶಕರ ಹಾಗೂ ಕ್ಷೇತ್ರ ಶಿಕ್ಷಣ ಾಧಿಕಾರಿಗಳ ಕಚೇರಿ, ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿಸೆ.5 ರಂದು ಡಾ.ಸರ್ವಪಲ್ಲಿರಾಧಾಕೃಷ್ಣನ್ ಅವರ ಜನ್ಮದಿನೋತ್ಸವ ನಿಮಿತ್ತ ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಧ್ಯಾಹ್ನ 2.30 ಕ್ಕೆ ನವನಗರದ ಕಲಾಭವನದಲ್ಲಿನಡೆಯುವ ಕಾರ್ಯಕ್ರಮವನ್ನು ಜಿಲ್ಲಾಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ ಉದ್ಘಾಟಿಸುವರು. ಶಾಸಕ ಉಮೇಶ ಮೇಟಿ ಅಧ್ಯಕ್ಷತೆ ವಹಿಸಲಿದ್ದು, ಅತಿಥಿಗಳಾಗಿ ಜಿಲ್ಲೆಯ ಜನಪ್ರತಿನಿಧಿಗಳು, ಗಣ್ಯರು ಆಗಮಿಸಲಿದ್ದಾರೆ.