ವಿಕ ಸುದ್ದಿಲೋಕ ಶಿವಮೊಗ್ಗಜಿಲ್ಲೆಯಲ್ಲಿಗಣೇಶ ಹಬ್ಬದ ಆಚರಣೆ ಮತ್ತು ಮೆರವಣಿಗೆ ಹಿನ್ನೆಲೆ ಸಾರ್ವಜನಿಕರ ಶಾಂತಿ ಹಾಗೂ ಸೌಹಾರ್ದತೆ ಕಾಪಾಡುವ ಉದ್ದೇಶದಿಂದ ಸೆ.14ರಿಂದ ಅಕ್ಟೋಬರ್ 13ರ ವರೆಗೆ ಒಂದು ತಿಂಗಳ ಕಾಲ ಜಿಲ್ಲಾದ್ಯಂತ ಡಿಜೆ ಬಳಕೆ, ಕಲರ್ ಪೇಪರ್ ಬ್ಲಾಸ್ಟಿಂಗ್ , ಸಿಡಿಮದ್ದು ಸಿಡಿಸುವುದು ಮತ್ತು ಬೈಕ್ ರಾರ ಯಲಿಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶಿಸಿದ್ದಾರೆ.
ಸೆ.14ರಂದು ಜಿಲ್ಲಾದ್ಯಂತ ಗಣೇಶ ಹಬ್ಬ ನಡೆಯಲಿದ್ದು, ಆಚರಣೆ ಸಂದರ್ಭ ಸಾರ್ವಜನಿಕರು, ವಿದ್ಯಾರ್ಥಿಗಳು, ವಯಸ್ಕರು, ಆಸ್ಪತ್ರೆಯಲ್ಲಿಚಿಕಿತ್ಸೆ ಪಡೆಯುವ ರೋಗಿಗಳಿಗೆ ತೊಂದರೆಯಾಗುವ ಜತೆಗೆ ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗುವ ಸಾಧ್ಯತೆ ಇದೆ. ಈ ಹಿನ್ನೆಲೆ ಪೊಲೀಸ್ ಅಧೀಕ್ಷಕರ ಶಿಫಾರಸಿನಂತೆ ಮುಂಜಾಗ್ರತಾ ಕ್ರಮವಾಗಿ ಈ ಆದೇಶ ಹೊರಡಿಸಲಾಗಿದೆ.
ಗಣೇಶ ವಿಸರ್ಜನೆಗೆ ತೆಪ್ಪ ಬಳಕೆಗೆ ಕಟ್ಟುನಿಟ್ಟಿನ ನಿಯಮ
ಗಣೇಶ ಚತುರ್ಥಿ ಹಿನ್ನೆಲೆ ಹೊಳೆ, ನದಿ, ಕೆರೆ ಹಾಗೂ ಹಿನ್ನೀರು ಪ್ರದೇಶಗಳಲ್ಲಿತೆಪ್ಪದ ಮೂಲಕ ಮೂರ್ತಿ ವಿಸರ್ಜನೆ ಮಾಡುವ ಸಂದರ್ಭದಲ್ಲಿಮುನ್ನೆಚ್ಚರಿಕೆ ಕ್ರಮಗಳನ್ನು ಕಡ್ಡಾಯವಾಗಿ ಕೈಗೊಳ್ಳಬೇಕು. ತೆಪ್ಪದ ಮೂಲಕ ಗಣೇಶ ವಿಸರ್ಜನೆ ಮಾಡುವಾಗ ತೆಪ್ಪದಲ್ಲಿ2 ರಿಂದ 3 ಜನರಿಗೆ ಮಾತ್ರ ಅವಕಾಶ ಇರುತ್ತದೆ. ತೆಪ್ಪದಲ್ಲಿತೆರಳುವ ಪ್ರತಿಯೊಬ್ಬರೂ ಕಡ್ಡಾಯವಾಗಿ ಲೈಫ್ ಜ್ಯಾಕೆಟ್ ಧರಿಸಿರಬೇಕು. ನುರಿತ ಈಜುಗಾರರ ಎದುರಿನಲ್ಲಿಗಣಪತಿ ಮೂರ್ತಿ ವಿಸರ್ಜನೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿತಿಳಿಸಿದ್ದಾರೆ.