ವಿಶೇಷ ತೀವ್ರ ಪರಿಷ್ಕರಣೆ(ಎಸ್ ಐಆರ್ ) ಪ್ರಕ್ರಿಯೆಯಡಿ ನಗರದ ಬಾಲಭವನದಲ್ಲಿನಡೆಯುತ್ತಿರುವ ನೋಟಿಸ್ ಗಳ ವಿಚಾರಣಾ ಪ್ರಕ್ರಿಯೆಯನ್ನು ಜಿಲ್ಲಾಧಿಕಾರಿ ಡಾ.ಕುಮಾರ ಪರಿಶೀಲನೆ ನಡೆಸಿದರು.ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ವಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯಡಿ ಮತದಾರರ ಪಟ್ಟಿಗೆ ಸಂಬಂಧಿಸಿದ ನೋಟಿಸ್ ಗಳ ವಿಚಾರಣೆಯನ್ನು ಹೆಚ್ಚುವರಿ ಮತದಾರ ನೋಂದಣಾಧಿಕಾರಿಗಳ(ಎಇಆರ್ ಒ) ಹಂತದಲ್ಲಿನಡೆಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿಸ್ಥಳಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ನೀಡಿದ್ದರು.
‘‘ವಿಚಾರಣೆಗೆ ಹಾಜರಾಗಿದ್ದ ಮತದಾರರೊಂದಿಗೆ ಸಂವಹನ ನಡೆಸಿದ ಜಿಲ್ಲಾಧಿಕಾರಿ ಡಾ.ಕುಮಾರ ಅವರು, ನೋಟಿಸ್ ಗೆ ಸಂಬಂಧಿಸಿದಂತೆ ಸಲ್ಲಿಸಲಾಗುತ್ತಿರುವ ದಾಖಲೆಗಳು, ದಾಖಲೆಗಳ ಪರಿಶೀಲನೆ, ಅರ್ಜಿಗಳ ಸ್ವೀಕಾರ ಹಾಗೂ ಪ್ರಕರಣಗಳ ವಿಲೇವಾರಿಗೆ ಅನುಸರಿಸಲಾಗುತ್ತಿರುವ ಕ್ರಮಗಳ ಕುರಿತು ಪರಿಶೀಲಿಸಿದರು. ಅಲ್ಲದೇ ವಿಚಾರಣೆಗೆ ಆಗಮಿಸುವ ಮತದಾರರಿಗೆ ಅಗತ್ಯ ಮಾಹಿತಿ ಮತ್ತು ಮಾರ್ಗದರ್ಶನವನ್ನು ಸಮರ್ಪಕವಾಗಿ ಒದಗಿಸಬೇಕು,’’ ಎಂದು ಸೂಚಿಸಿದರು.
‘‘ ಮತದಾರರ ಪಟ್ಟಿಯ ನಿಖರತೆ ಮತ್ತು ಪಾರದರ್ಶಕತೆಯನ್ನು ಖಚಿತಪಡಿಸುವುದು ಅತ್ಯಂತ ಮಹತ್ವದ್ದಾಗಿದೆ. ವಿಶೇಷ ತೀವ್ರ ಪರಿಷ್ಕರಣೆಯ ಪ್ರತಿಯೊಂದು ಹಂತದಲ್ಲಿಯೂ ಭಾರತ ಚುನಾವಣಾ ಆಯೋಗ ನಿಗದಿಪಡಿಸಿರುವ ಮಾರ್ಗಸೂಚಿ ಹಾಗೂ ವಿಧಾನಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ನೋಟಿಸ್ ಪಡೆದ ಮತದಾರರಿಗೆ ತಮ್ಮ ದಾಖಲೆಗಳನ್ನು ಸಲ್ಲಿಸಲು ಹಾಗೂ ತಮ್ಮ ಅಹವಾಲುಗಳನ್ನು ತಿಳಿಸಲು ಸೂಕ್ತ ಅವಕಾಶ ಕಲ್ಪಿಸಿ, ಯಾವುದೇ ಅರ್ಹ ಮತದಾರರಿಗೆ ಅನಗತ್ಯ ತೊಂದರೆಯಾಗದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಿ,’’ ಎಂದು ಜಿಲ್ಲಾಧಿಕಾರಿಗಳು ನಿರ್ದೇಶಿಸಿದರು.
‘‘ಸ್ವೀಕರಿಸಲಾದ ದಾಖಲೆಗಳನ್ನು ನಿಯಮಾನುಸಾರ ಪರಿಶೀಲಿಸಿ, ಬಾಕಿ ಇರುವ ಪ್ರಕರಣಗಳನ್ನು ನಿಗದಿತ ಕಾಲಮಿತಿಯೊಳಗೆ ಪಾರದರ್ಶಕವಾಗಿ ಮತ್ತು ಸಮರ್ಪಕವಾಗಿ ವಿಲೇವಾರಿ ಮಾಡಬೇಕು. ಜತೆಗೆ, ವಿಚಾರಣಾ ಪ್ರಕ್ರಿಯೆಯಲ್ಲಿಚುನಾವಣಾ ಆಯೋಗದ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು,’’ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಮಂಡ್ಯ ಉಪ ವಿಭಾಗಾಧಿಕಾರಿಗಳು, ಹೆಚ್ಚುವರಿ ಮತದಾರ ನೋಂದಣಾಧಿಕಾರಿಗಳು ಹಾಗೂ ಚುನಾವಣಾ ಕಾರ ್ಯಕ್ಕೆ ನಿಯೋಜಿಸಲಾದ ಸಂಬಂಧಪಟ್ಟ ಅಧಿಕಾರಿಗಳು ಇದ್ದರು.