ಪಿಎಂ ಕಿಸಾನ್ ಯೋಜನೆ ಫಲಾನುಭವಿಗಳು ಬ್ಯಾಂಕ್ ಖಾತೆಗೆ ಇ-ಕೆವೈಸಿ ಕಡ್ಡಾಯ
ಶಿರಾ: ಪಿಎಂ ಕಿಸಾನ್ ಯೋಜನೆಯ ಮುಂದಿನ ಕಂತಿನ ಹಣ ಪಡೆಯಲು ರೈತರು ಬ್ಯಾಂಕ್ ಖಾತೆಗೆ ಬಯೋಮೆಟ್ರಿಕ್ ಅಥವಾ ಮುಖ ದೃಢೀಕರಣ ಆಧಾರಿತ ಇ-ಕೆವೈಸಿ ಪೂರ್ಣಗೊಳಿಸುವುದು ಕಡ್ಡಾಯ ಎಂದು ಸಹಾಯಕ ಕೃಷಿ ನಿರ್ದೇಶಕ ಎಚ್ .ನಾಗರಾಜು ತಿಳಿಸಿದ್ದಾರೆ.ಇ-ಕೆವೈಸಿ ಮಾಡಿಸಿಕೊಳ್ಳಲು ಎರಡು ವಿಧಾನಗಳಲ್ಲಿಅವಕಾಶವಿದೆ. ಮೊದಲನೆಯದಾಗಿ ರೈತರು ಬಯೋಮೆಟ್ರಿಕ್ ಅಥವಾ ಮುಖ ದೃಢೀಕರಣದ ಮೂಲಕ ಇ-ಕೆವೈಸಿ ಮಾಡಿಕೊಳ್ಳಬಹುದು. ಬಯೋಮೆಟ್ರಿಕ್ ಆಧಾರಿತ ಇ-ಕೆವೈಸಿಯನ್ನು ಸಾಮಾನ್ಯ ಸೇವಾ ಕೇಂದ್ರ (ಸಿ.ಎಸ್ .ಸಿ), ಗ್ರಾಮ ಒನ್ , ಕರ್ನಾಟಕ ಒನ್ ಮತ್ತು ಗ್ರಾಮ ಪಂಚಾಯಿತಿಗಳಲ್ಲಿನಿಯೋಜನೆಯಲ್ಲಿರುವ ಕೃಷಿ ಸಝಿಯರಿಂದಲೂ ಹಾಗೂ ಆಯಾಯ ಹೋಬಳಿಗಳಲ್ಲಿರುವ ರೈತ ಸಂಪರ್ಕ ಕೇಂದ್ರಗಳಲ್ಲಿಮಾಡಿಸಿಕೊಳ್ಳಬಹುದು. ಇ-ಕೆವೈಸಿ ಮಾಡಿಸದ ಫಲಾನುಭವಿಗಳಿಗೆ ಮುಂದಿನ ಕಂತಿನ ಹಣ ಜಮೆಯಾಗುವಲ್ಲಿಅಡಚಣೆಯಾಗುವ ಸಾಧ್ಯತೆಯಿದೆ. ಪಿಎಂ ಕಿಸಾನ್ ಯೋಜನೆಯ 24ನೇ ಕಂತು ಸೆಪ್ಟೆಂಬರ್ ನಲ್ಲಿಬಿಡುಗಡೆಯಾಗುವ ನಿರೀಕ್ಷೆಯಿದೆ. ಈ ಯೋಜನೆಯಡಿ ಪ್ರತಿ ನಾಲ್ಕು ತಿಂಗಳಿಗೊಮ್ಮೆ 2000 ರೂ.ನಂತೆ ವರ್ಷಕ್ಕೆ ಮೂರು ಕಂತುಗಳಲ್ಲಿಒಟ್ಟು 6000 ರೂ. ರೈತರ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ (ಡಿಬಿಟಿ) ಮೂಲಕ ಜಮೆ ಮಾಡಲಾಗುತ್ತದೆ.
ರೈತರು ಸ್ವತಃ ಮೊಬೈಲ್ ಮೂಲಕ ಇ-ಕೆವೈಸಿ ಪೂರ್ಣಗೊಳಿಸಬಹುದು. ಇದಕ್ಕಾಗಿ ಗೂಗಲ್ ಪ್ಲೇ ಸ್ಟೋರ್ ನಿಂದ ಪಿಎಂ ಕಿಸಾನ್ ಮೊಬೈಲ್ ಆಪ್ ಹಾಗೂ ಆಧಾರ್ ಫೇಸ್ ಆರ್ ಡಿ ಆಪ್ ಡೌನ್ ಲೋಡ್ ಮಾಡಿಕೊಂಡು ನೋಂದಾಯಿತ ಮೊಬೈಲ್ ಸಂಖ್ಯೆಯ ಮೂಲಕ ಲಾಗಿನ್ ಆಗಿ, ಆಧಾರ್ ಸಂಖ್ಯೆ ನಮೂದಿಸಿ ಮುಖ ದೃಡೀಕರಣ ಪೂರ್ಣಗೊಳಿಸಿದರೆ ಇ-ಕೆವೈಸಿ ಪ್ರಕ್ರಿಯೆಯು ಪೂರ್ಣಗೊಳ್ಳುತ್ತದೆ. ಶಿರಾ ತಾಲೂಕಿನ ಎಲ್ಲಾರೈತ ಬಾಂಧವರು ಇದರ ಸದುಪಯೋಗಪಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.