ಕಡಬ ತಾಲೂಕು ಪ.ಪೂ. ಕಾಲೇಜು ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಚಾಲನೆ

Contributed bybkyashas2010@gmail.com|Vijaya Karnataka
inauguration of kabaddi tournament in kadaba taluk
ವಿಕ ಸುದ್ದಿಲೋಕ ಕಡಬ

ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ದಕ್ಷಿಣ ಕನ್ನಡ ಜಿಲ್ಲೆಹಾಗೂ ಸೈಂಟ್ ಜೋಕಿಮ್ಸ್ ಕಾಲೇಜು ಕಡಬ ಆಶ್ರಯದಲ್ಲಿಕಡಬ ತಾಲೂಕು ಪದವಿಪೂರ್ವ ಕಾಲೇಜು ವಿಭಾಗದ ಬಾಲಕ ಮತ್ತು ಬಾಲಕಿಯರ ಕಬಡ್ಡಿ ಪಂದ್ಯಾಟದ ಉದ್ಘಾಟನಾ ಸಮಾರಂಭ ಸೈಂಟ್ ಜೋಕಿಮ್ಸ್ ಕಾಲೇಜಿನ ಸಭಾಂಗಣದಲ್ಲಿನಡೆಯಿತು.
ಪಂದ್ಯಾಟವನ್ನು ಉದ್ಘಾಟಿಸಿದ ದಕ್ಷಿಣ ಕನ್ನಡ ಜಿಲ್ಲಾಪದವಿಪೂರ್ವ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ರಾಧಾಕೃಷ್ಣ ಮಾತನಾಡಿ, ಕ್ರೀಡಾಪಟುಗಳು ಕ್ರೀಡಾ ನಿಯಮಗಳಿಗೆ ಬದ್ಧರಾಗಿ ಕ್ರೀಡಾಸ್ಫೂರ್ತಿಯಿಂದ ಸ್ಪರ್ಧೆಗಳಲ್ಲಿಪಾಲ್ಗೊಳ್ಳಬೇಕು. ಗೆಲುವು-ಸೋಲುಗಳನ್ನು ಸಮಾನ ಮನೋಭಾವದಿಂದ ಸ್ವೀಕರಿಸುವ ಮೂಲಕ ನೈಜ ಕ್ರೀಡಾ ಮನೋಭಾವ ಎತ್ತಿಹಿಡಿಯಬೇಕೆಂದು ಹೇಳಿದರು.

ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಗಳ ಸಂಚಾಲಕ ಫಾ.ಪ್ರಕಾಶ್ ಪಾವ್ ್ಲಡಿಸೋಜ ಅಧ್ಯಕ್ಷತೆ ವಹಿಸಿದ್ದರು. ಸೈಂಟ್ ಆನ್ಸ್ ಆಂಗ್ಲಮಾಧ್ಯಮ ಪ್ರೌಢಶಾಲೆಯ ಪ್ರಿನ್ಸಿಪಾಲ್ ಸುನಿಲ್ ಪ್ರವೀಣ್ ಪಿಂಟೊ, ಸೈಂಟ್ ಜೋಕಿಮ್ಸ್ ಚರ್ಚ್ ಪಾಲನಾ ಮಂಡಳಿ ಉಪಾಧ್ಯಕ್ಷೆ ಜೆಸಿಂತಾ ವೇಗಸ್ , ಕಾರ್ಯದರ್ಶಿ ಜೇಮ್ಸ್ ಕೃಶಲ್ ಡಿಸೋಜ, ಕಡಬ ತಾಲೂಕು ಕ್ರೀಡಾ ಸಂಯೋಜಕ ಗಣೇಶ್ ಕೆ., ಕಾಲೇಜು ರಕ್ಷಕ-ಶಿಕ್ಷಕ ಸಮಿತಿ ಉಪಾಧ್ಯಕ್ಷ ಅಶ್ರಫ್ ಶೇಡಿಗುಂಡಿ, ಕಡಬ ತಾಲೂಕು ಅಮೆಚೂರ್ ಕಬಡ್ಡಿ ಫೆಡರೇಷನ್ ಅಧ್ಯಕ್ಷ ಯಾಕೂಬ್ , ಸೈಂಟ್ ಜೋಕಿಮ್ಸ್ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಸಿಸ್ಟರ್ ಹಿಲ್ಡಾ ರೋಡ್ರಿಗಸ್ ಹಾಗೂ ಸೈಂಟ್ ಜೋಕಿಮ್ಸ್ ಪ್ರೌಢಶಾಲೆಯ ಮುಖ್ಯಶಿಕ್ಷಕಿ ಶ್ರೀಲತಾ ಉಪಸ್ಥಿತರಿದ್ದರು.

ದೈಹಿಕ ಶಿಕ್ಷಣ ಶಿಕ್ಷಕ ಅರುಣ್ ಕುಮಾರ್ ಹಾಗೂ ಉಪನ್ಯಾಸಕ ಮ್ಯಾಥ್ಯೂ ಇ.ಜೆ. ಅತಿಥಿಗಳನ್ನು ಬರಮಾಡಿಕೊಂಡರು. ಸೈಂಟ್ ಜೋಕಿಮ್ಸ್ ಕಾಲೇಜಿನ ಪ್ರಿನ್ಸಿಪಾಲ್ ಕಿರಣ್ ಕುಮಾರ್ ಸ್ವಾಗತಿಸಿದರು. ಉಪನ್ಯಾಸಕಿ ವೇದಾವತಿ ಟಿ. ವಂದಿಸಿದರು. ಉಪನ್ಯಾಸಕ ರಾಜೇಶ್ ಎನ್ . ಕಾರ್ಯಕ್ರಮ ನಿರೂಪಿಸಿದರು.

(ಕನ್ನಡ ಜಿಲ್ಲಾಪದವಿಪೂರ್ವ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ರಾಧಾಕೃಷ್ಣ ಉದ್ಘಾಟಿಸಿದರು. ಫೊಟೋ...... 9ಕೆಡಿಬಿ ಯುಜಿ)