ಸಮರ್ಪಕ ಬಸ್ ಸೌಲಭ್ಯ ಕಲ್ಪಿಸಿ

Contributed bypraveendalabhanjan91@gmail.com|Vijaya Karnataka
student protest for bus services records and needs
ಸಮರ್ಪಕ ಬಸ್ ಸೌಲಭ್ಯ ಕಲ್ಪಿಸಿ

ವಿಕ ಸುದ್ದಿಲೋಕ ಗಂಗಾವತಿ
ಸಮರ್ಪಕ ಬಸ್ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ತಾಲೂಕಿನ ಆಗೋಲಿ ಗ್ರಾಮದಲ್ಲಿಬಸ್ ಸಂಚಾರ ತಡೆದು ಮಂಗಳವಾರ ಪ್ರತಿಭಟನೆ ನಡೆಸಿದರು.

ಗ್ರಾಮಗಳಿಗೆ ಬಸ್ ಸೌಲಭ್ಯ ಇಲ್ಲ. ಮನವಿ ಮಾಡಿದರೂ ಅಧಿಕಾರಿಗಳು ಸ್ಪಂದಿಸಿಲ್ಲ. ಹೀಗಾಗಿ ಪ್ರತಿಭಟನೆಗೆ ಮುಂದಾಗಿದ್ದೇವೆ. ಬಸ್ ಸೌಲಭ್ಯ ಕಲ್ಪಿಸುವರರಿಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ

ಎಂದು ಪಟ್ಟು ಹಿಡಿದರು.

ಎಬಿವಿಪಿ ಸಂಚಾಲಕ ಅಭೀಷೆಕ ಹಿರೇಮಠ, ಬಿಜೆಪಿ ಹಿರಿಯ ಮುಖಂಡ ವಿರೂಪಾಕ್ಷಪ್ಪ ಸಿಂಗನಾಳ ಅವರು ಕೆಎಸ್ ಆರ್ ಟಿಸಿ ಘಟಕ ವ್ಯವಸ್ಥಾಪಕರಿಗೆ ದೂರವಾಣಿ ಮೂಲಕ ಮಾತನಾಡಿ, ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಪರಿಶೀಲಿಸಬೇಕು. ಬಸ್ ವ್ಯವಸ್ಥೆ ಮಾಡಬೇಕು. ಇಲ್ಲದಿದ್ದರೆ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು. ನಂತರ ಘಟಕ ವ್ಯವಸ್ಥಾಪಕ ಪ್ರವೀಣ ಎರಡು ದಿನಗಳಲ್ಲಿ

ಈ ಮಾರ್ಗಕ್ಕೆ ಸರಿಯಾದ ಸಮಯಕ್ಕೆ ಬಸ್ ಸೌಲಭ್ಯ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು. ಪ್ರತಿಭಟನೆಯಲ್ಲಿಕಾರ್ಯಕರ್ತರು, ವಿದ್ಯಾರ್ಥಿಗಳು, ಗ್ರಾಮಸ್ಥರು ಇದ್ದರು.

09 ಗಂಗಾವತಿ 02

ಗಂಗಾವತಿ ತಾಲೂಕಿನ ಆಗೋಲಿ ಗ್ರಾಮದಲ್ಲಿಬಸ್ ಸಂಚಾರ ತಡೆದು ವಿದ್ಯಾರ್ಥಿಗಳು ಮಂಗಳವಾರ ಪ್ರತಿಭಟನೆ ನಡೆಸಿದರು.