ವಿಕ ಸುದ್ದಿಲೋಕ ಕುಂದಗೋಳವಿದ್ಯಾರ್ಥಿಗಳಲ್ಲಿಜ್ಞಾನ, ಸಂಸ್ಕಾರ ಹಾಗೂ ಉತ್ತಮ ಮೌಲ್ಯಗಳನ್ನು ಬೆಳೆಸಿ, ಅವರನ್ನು ಭವಿಷ್ಯದ ಉತ್ತಮ ಪ್ರಜೆಗಳನ್ನಾಗಿ ರೂಪಿಸುವಲ್ಲಿಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಶಾಸಕ ಎಂ.ಆರ್ .ಪಾಟೀಲ ಹೇಳಿದರು.
ಅವರು ಪಟ್ಟಣದ ಜೆಎಸ್ ಎಸ್ ವಿದ್ಯಾಪೀಠ ಮಹಾವಿದ್ಯಾಲಯದ ಸಭಾಂಗಣದಲ್ಲಿಧಾರವಾಡ ಜಿಲ್ಲಾ ಪಂಚಾಯಿತಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಸಹಯೋಗದಲ್ಲಿಡಾ.ಸರ್ವಪಲ್ಲಿರಾಧಾಕೃಷ್ಣನ್ ಅವರ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಶಿಕ್ಷಕರು ವಿದ್ಯಾರ್ಥಿಗಳಿಗೆ ಪಾಠ ಬೋಧಿಸುವುದರ ಜತೆಗೆ ನಯ, ವಿನಯ, ಶಿಸ್ತು ಹಾಗೂ ಜೀವನ ಮೌಲ್ಯಗಳನ್ನು ಕಲಿಸುತ್ತಾರೆ. ಶಿಕ್ಷಕರ ಮಾರ್ಗದರ್ಶನದಿಂದಲೇ ಮಕ್ಕಳು ವಿವಿಧ ಕ್ಷೇತ್ರಗಳಲ್ಲಿಸಾಧನೆ ಮಾಡಲು ಸಾಧ್ಯವಾಗುತ್ತದೆ. ಶಿಕ್ಷಕರ ನಿಸ್ವಾರ್ಥ ಸೇವೆಯನ್ನು ಸಮಾಜ ಸದಾ ಗೌರವಿಸಬೇಕು ಎಂದು ಹೇಳಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಮಹಾದೇವಿ ಮಾಡಲಗೇರಿ ಪ್ರಾಸ್ತಾವಿಕ ಮಾತನಾಡಿ, ಶಿಕ್ಷಕ ವೃತ್ತಿಗೆ ನಿವೃತ್ತಿ ಎಂಬುದಿಲ್ಲ. ಕಲಿಯುವ ಮತ್ತು ಕಲಿಸುವ ಪ್ರಕ್ರಿಯೆ ನಿರಂತರವಾಗಿದ್ದು, ಹೃದಯಪೂರ್ವಕವಾಗಿ ಬೋಧಿಸುವ ಶಿಕ್ಷಕರಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದರು.
ಜಿಲ್ಲಾ ಹಾಗೂ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರನ್ನು, ವಿವಿಧ ಕ್ಷೇತ್ರಗಳಲ್ಲಿಸಾಧನೆ ಮಾಡಿದ ಸಾಧಕರನ್ನು ಹಾಗೂ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು. ಕಲ್ಯಾಣಪುರ ಮಠದ ಶ್ರೀ ಬಸವಣ್ಣಜ್ಜನವರು ಹಾಗೂ ಶಿವಾನಂದ ಮಠದ ಶ್ರೀ ಶಿವಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.
ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ನೆಹರು ಪಾಟೀಲ, ಕರಾಪ್ರಾಶಾಶಿ ಸಂಘದ ಧಾರವಾಡ ಜಿಲ್ಲಾ ಉಪಾಧ್ಯಕ್ಷ ಎಂ.ಎಂ.ಘೋಡಕೆ. ಕರಾಸನೌ ಸಂಘದ ತಾಲೂಕು ಅಧ್ಯಕ್ಷ ಮುತ್ತಪ್ಪ ಅಣ್ಣಿಗೇರಿ, ಮುಖಂಡರಾದ ಉಮೇಶ ಹೆಬಸೂರು, ಮುತ್ತಣ್ಣ ಉಪ್ಪಿನ, ದಾನಪ್ಪ ಗಂಗಾಯಿ, ರಾಜಣ್ಣ ಬೆಟಗೇರಿ, ಲೋಕೇಶ್ ಸರಾವರಿ, ಶಿಕ್ಷಣ ಪ್ರೇಮಿ ಎಫ್ .ಕೆ.ಬಾಳಿಹಳ್ಳಿಮಠ, ಸೋಮನಗೌಡ ಪಾಟೀಲ, ಎಚ್ .ಪಿ.ನದಾಫ್ ಉಪಸ್ಥಿತರಿದ್ದರು.
ಫೋಟೋ 9 ಕೆ ಎನ್ ಡಿ 1
ಕುಂದಗೋಳದ ಜೆಎಸ್ ಎಸ್ ವಿದ್ಯಾಪೀಠ ಮಹಾವಿದ್ಯಾಲಯದಲ್ಲಿಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಶಾಸಕ ಎಂ.ಆರ್ . ಪಾಟೀಲ ಉದ್ಘಾಟಿಸಿದರು.