ಶಿವಮೊಗ್ಗದಲ್ಲಿ ವಿಶ್ವ ಹೃದಯ ದಿನ ಹಾಗೂ ವಿಶ್ವ ರೇಬಿಸ್ ದಿನ ಆಚರಿಸಲಾಯಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಸ್.ನಟರಾಜ್ ಅವರು ಮಾತನಾಡಿದರು. ಕಿರಿಯ ವಯಸ್ಸಿನವರಲ್ಲಿ ಹೃದಯ ಸಮಸ್ಯೆ ಹೆಚ್ಚುತ್ತಿದ್ದು, ಜೀವನಶೈಲಿ ಬದಲಾವಣೆ ಅನಿವಾರ್ಯ ಎಂದರು. ರೇಬಿಸ್ ರೋಗ ಲಕ್ಷಣಗಳು ಪ್ರಾರಂಭವಾದರೆ ಅದು ಶೇ.100 ಮಾರಣಾಂತಿಕ ಎಂದು ಡಾ.ಎಲ್. ನಾಗರಾಜ ನಾಯ್ಕ ತಿಳಿಸಿದರು. ವಿದ್ಯಾರ್ಥಿಗಳು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಕರೆ ನೀಡಲಾಯಿತು.
ಶಿವಮೊಗ್ಗ : ಕಿರಿಯ ವಯೋಮಾನದವರಲ್ಲಿಯೂ ಹೃದಯ ಸಂಬಂಧಿ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿದ್ದು, ಇದರ ಪರಿಹಾರಕ್ಕೆ ಜೀವನಶೈಲಿ ಬದಲಾವಣೆ ಅನಿವಾರ್ಯ ಎಂದು ಜಿಲ್ಲಾಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಸ್.ನಟರಾಜ್ ಹೇಳಿದರು.
ನಗರದ ಸಹ್ಯಾದ್ರಿ ವಿಜ್ಞಾನ ಕಾಲೇಜಿನಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾಪಂಚಾಯಿತಿ, ಜಿಲ್ಲಾಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ , ಜಿಲ್ಲಾಎನ್‌ಸಿಡಿ ಘಟಕ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿಆಯೋಜಿಸಿದ್ದ ವಿಶ್ವ ಹೃದಯ ದಿನ ಹಾಗೂ ವಿಶ್ವ ರೇಬಿಸ್ ದಿನ ಉದ್ಘಾಟಿಸಿ ಅವರು ಮಾತನಾಡಿದರು.ವಿದ್ಯಾರ್ಥಿಗಳಿಗೆ ಹೃದಯ ಸಂಬಂಧಿ ಸಮಸ್ಯೆ ಮತ್ತು ರೇಬಿಸ್ ರೋಗದ ಬಗ್ಗೆ ಮಾಹಿತಿ ನೀಡಿ, ಅದನ್ನು ಸ್ಥಳೀಯ ನಿವಾಸಿಗಳು ಹಾಗೂ ಸಾರ್ವಜನಿಕರಲ್ಲಿಯೂ ಹಂಚಿಕೊಳ್ಳುವ ಮೂಲಕ ಅರಿವು ಮೂಡಿಸಬೇಕು ಎಂದು ತಿಳಿಸಿದರು.
ಜಿಲ್ಲಾಸರ್ವೇಕ್ಷಣಾಧಿಕಾರಿ ಡಾ.ಎಲ್. ನಾಗರಾಜ ನಾಯ್ಕ ಪ್ರಾಸ್ತಾವಿಕವಾಗಿ ಮಾತನಾಡಿ, ಈ ವರ್ಷದ ವಿಶ್ವ ರೇಬಿಸ್ ದಿನದ ಘೋಷಣೆ 'ರೇಬೀಸ್ ತಡೆಗಟ್ಟಲು ಮುಂದಾಗೋಣ: ನೀವು, ನಾನು, ನಮ್ಮ ಸಮಾಜ' ಎಂಬುದಾಗಿದೆ. ರೇಬಿಸ್ ರೋಗ ಲಕ್ಷಣಗಳು ಪ್ರಾರಂಭವಾದ ನಂತರ ಯಾವುದೆ ಚಿಕಿತ್ಸೆಯಿಂದ ರೋಗಿಯನ್ನು ಬದುಕಿಸಲು ಸಾಧ್ಯವಿಲ್ಲ. ಇದು ಶೇ.100 ಮಾರಣಾಂತಿಕ ಕಾಯಿಲೆ ಎಂದರು.
ಪ್ರಾಂಶುಪಾಲರಾದ ಪ್ರೊ.ಎನ್.ರಾಜೇಶ್ವರಿ ಅಧ್ಯಕ್ಷತೆ ವಹಿಸಿದ್ದರು. ಪ್ರೊ.ಜಿ.ಕೃಷ್ಣಮೂರ್ತಿ ಸ್ವಾಗತಿಸಿದರು. ಜಿಲ್ಲಾರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಗುಡದಪ್ಪ ಕಸಬಿ, ವೈದ್ಯರಾದ ಡಾ.ಸಿ. ಹರ್ಷವರ್ಧನ್, ಡಾ.ಪಿ. ವೆಂಕಟೇಶ್, ಡಾ.ಜಿ.ಬಿ.ಚಂದ್ರಶೇಖರ್, ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳಿದ್ದರು.
ಲೇಖಕರ ಬಗ್ಗೆಶ್ರೀಲಕ್ಷ್ಮೀ ಎಚ್ಎಲ್ಶ್ರೀಲಕ್ಷ್ಮೀ ಅವರು ಮಲೆನಾಡ ಹೆಬ್ಬಾಗಿಲು ಶಿವಮೊಗ್ಗೆಯವರು. ಕಳೆದ 5 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ. ಸದ್ಯ ವಿಜಯ ಕರ್ನಾಟಕ ಆನ್‌ಲೈನ್ ನಲ್ಲಿ ಡಿಜಿಟಲ್ ಕಂಟೆಂಟ್ ಪ್ರೊಡ್ಯೂಸರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ದೇಶೀಯ ಸುದ್ದಿಗಳು, ಲೈಫ್‌ಸ್ಟೈಲ್ ಸುದ್ದಿಗಳನ್ನು ಬರೆಯುವುದು ಅಚ್ಚುಮೆಚ್ಚು. ಹೊಸ ಹೊಸ ವಿಚಾರಗಳಿಗೆ ತೆರೆದುಕೊಳ್ಳುವುದು, ಕಲಿಯುವುದು, ಹೊಸ ಜಾಗಗಳಿಗೆ ಭೇಟಿ ನೀಡುವುದು ಇಷ್ಟದ ವಿಚಾರ.... ಇನ್ನಷ್ಟು ಓದಿ